ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ

Share this post :

ಕುಶಾಲನಗರ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ವಿಷನ್ ಕರ್ನಾಟಕ ಫೌಂಡೇಶನ್, ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಹಾಗೂ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ Raising and Accelerating MSME Performance ಅಡಿ Incubation ಯೋಜನೆ ಕುರಿತು ಬುಧವಾರ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು.
ಕಾರ್ಯಾಗಾರದ ಮಾನವ ಸಂಪನ್ಮೂಲ ವ್ಯಕ್ತಿಯಾಗಿ ಡಿಎಫ್‌ಒ ಎಂಎಸ್‌ಎಂಇ ನಿವೃತ್ತ ಉಪ ನಿರ್ದೇಶಕ ಗೋಪಿನಾಥ್ ರಾವ್, ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿವರವಾದ ತಾಂತ್ರಿಕ ಉಪನ್ಯಾಸ ನೀಡಿದರು. ಈ ಕಾರ್ಯಕ್ರಮವನ್ನು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಹನುಮಂತರಾಯ ಕೆ. ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪರಶಿವಮೂರ್ತಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪ್ರಾಧ್ಯಾಪಕರುಗಳಾದ ಡಾ ಎನ್.ಎಸ್. ಸತೀಶ, ಡಾ. ಶೀನಪ್ಪ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಕುಶಾಲನಗರ, ಹಾಗೂ ಸಿ.ಎನ್. ರಘು, ಉಪ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಉಪಸ್ಥಿತರಿದ್ದರು.

coorg buzz
coorg buzz