ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಹೇಳನ ಮಾಡಿದ ಯುವಕರ ಗಡಿಪಾರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.
ಇಂದಿರಾಗಾಂಧಿ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ನಗರಸಭೆ ಅಧ್ಯಕ್ಷೆ ಕಲಾವತಿ. ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.



