ಮಡಿಕೇರಿಯಲ್ಲಿ ಗಮನ ಸೆಳೆದ ಪೊಲೀಸ್ ರನ್ ಮ್ಯಾರಾಥಾನ್

Police Run Marathon

Share this post :

coorg buzz

ಕರ್ನಾಟಕ ರಾಜ್ಯ ಪೊಲೀಸ್ (Police) ಇಲಾಖೆಯ ಫಿಟ್ನೆಸ್ ಫಾರ್ ಅಲ್ (Fitness for all) ಎಂಬ ಧ್ಯೇಯ ವಾಕ್ಯದೊಂದಿಗೆ ರಾಜ್ಯದಾದ್ಯಂತ ಇಂದು ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರೊಂದಿಗೆ ಮ್ಯಾರಥಾನ್ ಅನ್ನು ಆಯೋಜಿಸಲಾಗಿತ್ತು. ಈ ಕಾಯಕ್ರಮದ ಭಾಗವಾಗಿ ಕೊಡಗು ಜಿಲ್ಲಾ ಪೊಲೀಸ್ ಘಟಕದ ಆಯೋಜನೆಯಲ್ಲಿ ಡ್ರಗ್ಸ್ ಮುಕ್ತ ಕೊಡಗು ಎನ್ನುವ ಪರಿಕಲ್ಪನೆಯೊಂದಿಗೆ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದವರೆಗೆ ಪೊಲೀಸ್ ರನ್ ಮ್ಯಾರಾಥಾನ್ (Police Run Marathon) ನಡೆಯಿತು.

ವಿಕ್ರಮ್ ಜಾದೂಗಾರ್ ರವರಿಂದ ಮಾದಕ ದ್ರವ್ಯವನ್ನು ನಾಶಪಡಿಸುವ ಪರಿಕಲ್ಪನೆಯ ಜಾದೂ ಕಾರ್ಯಕ್ರಮವನ್ನು ಸಹ ಆ ಏರ್ಪಡಿಸಲಾಗಿತ್ತು. ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮಗಳ ಬಗ್ಗೆ ನೆರೆದಿದ್ದ ವಿದ್ಯಾರ್ಥಿಗಳೊಂದಿಗೆ ಪ್ರಶ್ನೋತ್ತರ ಸಂವಾದ ನಡೆಸಿ ಜಾಗೃತಿ ಮೂಡಿಸಲಾಯಿತು. ಕೊಡಗು ಜಿಲ್ಲಾ ಪೊಲೀಸ್ ಘಟಕದ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಇತರೆ ಸಾರ್ವಜನಿಕರು ಸೇರಿದಂತೆ ಸುಮಾರು 600-700 ಮಂದಿ ಈ ರಸ್ತೆ ಓಟದಲ್ಲಿ ಭಾಗವಹಿಸಿದರು.