ಗೋಣಿಕೊಪ್ಪ : ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತೂಚಮಕೇರಿಯಲ್ಲಿ ನಡೆದಿದೆ.
ಮೂಕಳಮಾಡ ಸುರೇಶ್ ಎಂಬವರ ಪತ್ನಿ ಸುಮಿತಾ(48) ಆತ್ಮಹ*ತ್ಯೆಗೆ ಶರಣಾದವರು. ಇಂದು(ಸೋಮವಾರ) ಬೆಳಗ್ಗೆ ಮನೆ ಬಳಿಯ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವು ದಿನಗಳಿಂದ ಸುಮಿತಾ ಅವರು ಮಾನಸಿಕವಾಗಿ ಬಹಳ ನೊಂದಿದ್ದರು ಎನ್ನಲಾಗಿದೆ. ಹೀಗಾಗಿ ಆತ್ಮಹ*ತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಶ್ರೀಮಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.



