ಜನಮೆಚ್ಚುಗೆಯ ಶಿಕ್ಷಕಿ ಐರಿನ್ ಡಿಸೋಜಾ ವಯೋನಿವೃತ್ತಿ

Share this post :

ವಿರಾಜಪೇಟೆ : ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಐರಿನ್ ಡಿಸೋಜಾ ವಯೋನಿವೃತ್ತಿ ಹೊಂದಿದ್ದಾರೆ.
ಒಟ್ಟು 27 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿರುವ ಐರಿನ್‌ರವರು 1999ರಲ್ಲಿ ಹಚ್ಚಿನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ್ದರು. 2012ರಲ್ಲಿ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡು 13 ವರ್ಷ ಕಾಲ ಕಾರ್ಯನಿರ್ವಹಿಸಿದ್ದಾರೆ. ಸೇವಾ ಅವಧಿಯಲ್ಲಿ ಕರ್ತವ್ಯ ನಿಷ್ಠೆ, ಸರಳತೆ ಮೂಲಕ ವಿದ್ಯಾರ್ಥಿಗಳ ಹಾಗೂ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಐರಿನ್ ಡಿಸೋಜಾ ಶಾಲೆಯ ಸಮಗ್ರ ಅಭಿವೃದ್ಧಿಯಲ್ಲಿಯೂ ಕೊಡುಗೆ ನೀಡಿದ್ದಾರೆ. ಮೂಲತಃ ವಿರಾಜಪೇಟೆಯ ಆರ್ಜಿ ಗ್ರಾಮದ ಕಲ್ಲುಬಾಣೆಯವರಾದ ಇವರು ಲೂಯಿಸ್ ಪಿಂಟೋರವರ ಪತ್ನಿ.

coorg buzz
coorg buzz