ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ – ಇಲ್ಲಿದೆ ಸಂಪೂರ್ಣ ಮಾಹಿತಿ..!

Share this post :

ಮಡಿಕೇರಿ : ಪ್ರಸಕ್ತ(೨೦೨೫-೨೬) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ. ಮತ್ತು ಐಟಿಐ ಹಾಗೂ ಡಿಪ್ಲೊಮೊ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ ೩೦ ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ https://shp.karnataka.gov.in/bcwd
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್.ಸಿ. ಮತ್ತು ಎಸ್.ಟಿ ರೂ.೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.೧.೦೦ ಲಕ್ಷ ಆಗಿರುತ್ತದೆ. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್  https://shp.karnataka.gov.in/bcwd ಅನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳವರ ಕಚೇರಿ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಜಿಲ್ಲಾ ಕಚೇರಿ ಮಡಿಕೇರಿ ದೂ.ಸಂ. ೦೮೨೭೨-೨೯೫೬೨೮, ಮಡಿಕೇರಿ ತಾಲ್ಲೂಕು ಕಚೇರಿ ಮೊ.ಸಂಖ್ಯೆ ೮೭೬೨೪೭೬೭೯೦, ವಿರಾಜಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ ೯೪೪೮೨೦೫೯೧೯ ಮತ್ತು ಸೋಮವಾರಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ. ೯೪೮೧೭೭೨೧೪೩ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

coorg buzz
coorg buzz