ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ – ಜಿಲ್ಲಾಧಿಕಾರಿ ಹೇಳಿದ್ದೇನು..?

Share this post :

ಮಡಿಕೇರಿ : ಇದೇ ತಿಂಗಳ 28 ರಿಂದ ಮಾರ್ಚ್ 17 ರವರೆಗೆ ಮಡಿಕೇರಿ, ನಾಪೋಕ್ಲು, ಪೊನ್ನಂಪೇಟೆ, ಸೋಮವಾರಪೇಟೆ, ವಿರಾಜಪೇಟೆ, ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ, ನೆಲ್ಲಿಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು, ಮೂರ್ನಾಡು ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ಕುಶಾಲನಗರ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು, ವಿರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪ ಕಾವೇರಿ ಪದವಿ ಪೂರ್ವ ಕಾಲೇಜು, ಮಡಿಕೇರಿ ಸಂತ ಮೈಕಲರ ಪದವಿ ಪೂರ್ವ ಕಾಲೇಜು ಹಾಗೂ ಗೋಣಿಕೊಪ್ಪ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ. ಈ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್‍ಗಳನ್ನು ಮುಚ್ಚಿಸತಕ್ಕದೆಂದು ಸಹ ತಿಳಿಸಿದ್ದಾರೆ.

coorg buzz
coorg buzz