ವೇಶ್ಯಾವಾಟಿಕೆ ದಂಧೆ ಪ್ರಕರಣ – ಕೊಡಗಿನ ಒಬ್ಬ, ಕೇರಳದ ಮೂವರನ್ನು ಬಂಧಿಸಿದ ಕೊಡಗು ಪೊಲೀಸರು

Share this post :

ವೀರಾಜಪೇಟೆ : ಗಾಂಧಿನಗರದಲ್ಲಿನ ಆರೆಂಜ್ ಫ್ಯಾಮಿಲಿ ಬ್ಯೂಟಿ ಪಾಲರ್ & ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರದೀಪನ್ ಪಿ.ಪಿ, (48), ಕಲೇಶ್ ಕುಮಾರ್(45), ಶಾಜಿ(38), ವಿರಾಜಪೇಟೆ ತಾಲೂಕು ಅಮ್ಮತ್ತಿ ಗ್ರಾಮದ ನೆಲ್ಲಮಕ್ಕಡ ಎ. ಪೊನ್ನಣ್ಣ(48) ಬಂಧನಕ್ಕೊಳಗಾದವರು. ಖಚಿತ ಮಾಹಿತಿ ಮೇರೆಗೆ ಸೆ.18ರಂದು ದಾಳಿ ನಡೆಸಿದ್ದ ಪೊಲೀಸರು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರು ಮಹಿಳೆಯರನ್ನು ವಶಕ್ಕೆ ಪಡೆದು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು.
ಆರೋಪಿಗಳ ಪತ್ತೆಗಾಗಿ ಡಿವೈಎಸ್ಪಿ ಮಹೇಶ್ ಕುಮಾರ್.ಎಸ್, ಸಿಪಿಐ ಅನೂಪ್ ಮಾದಪ್ಪ ಪಿ., ವಿರಾಜಪೇಟೆ ನಗರ ಪೊಲೀಸ್ ಠಾಣೆ ಪಿಎಸ್‌ಐ ಪ್ರಮೋದ್, ಗ್ರಾಮಾಂತರ ಠಾಣೆ ಪಿಎಸ್‌ಐ ಲತಾ. ಎನ್.ಜೆ. ಮತ್ತು ಸಿಬ್ಬಂದಿಯ ತಂಡವನ್ನು ರಚಿಸಾಗಿತ್ತು. ಆರೋಪಿಗಳನ್ನು ಪತ್ತೆ ಮಾಡಿದ ತಂಡದ ಕಾರ್ಯಕ್ಕೆ ಜಿಲ್ಲಾ ಎಸ್ಪಿ ಕೆ. ರಾಮರಾಜನ್‌ ಅಭಿನಂದಿಸಿದ್ದಾರೆ.

coorg buzz
coorg buzz