ಸರ್ಕಾರಿ ಪ್ರಾಥಮಿಕ ಶಾಲೆಗಳ ಸೇವಾನಿರತ ಪದವೀದರ ಶಿಕ್ಷಕರಿಗೆ ಸಂಬಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಶಿಕ್ಷಕರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಪ್ರಾಥಮಿಕ ಶಾಲಾ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದಂತೆ ‘ವೃಂದ ಮತ್ತು ನೇಮಕಾತಿ’ ಆದೇಶದಿದ ತಿದ್ದುಪಡಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಬದಗಿಸುವಂತೆ ಆಗ್ರಹಿಸಿದರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷ ಹೆಚ್.ಎನ್.ಮಂಜುನಾಥ್, ಜಿಲ್ಲಾಧ್ಯಕ್ಷ ಕೆ.ಎಸ್.ಪ್ರಸನ್ನ ಕುಮಾರ್ ಸೇರಿದಂತೆ ಸಂಘದ ಪದಾಧಿಕಾರಿಗಳು, ವಿವಿಧ ಶಾಲೆಯ ಶಿಕ್ಷಕರಿದ್ದರು.



