ಮಡಿಕೇರಿ : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಆ.22ರಂದು ಪ್ರತಿಭಟನೆ ನಡೆಯಲಿದೆ.
ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಂಡಿದ್ದು, ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರದ ಹಾಗೂ ಇದನ್ನು ತಡೆಯುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಲಾಗುವುದೆಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ. ಅರುಣ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



