ಎಳೆಯ ಮಕ್ಕಳನ್ನು ಬಳಸಿ ಭಿಕ್ಷಾಟನೆ – ಕ್ರಮಕ್ಕೆ ಸಾರ್ವಜನಿಕರ ಆಗ್ರಹ…

Share this post :

ಕುಶಾಲನಗರ : ಕೊಡಗು ಜಿಲ್ಲೆಯ ಕುಶಾಲನಗರ ವ್ಯಾಪ್ತಿಯಲ್ಲಿ ಎಳೆಯ ಮಕ್ಕಳನ್ನು ಬಳಸಿಕೊಂಡು ಕೆಲವು ಮಹಿಳೆಯರ ತಂಡ ಭಿಕ್ಷಾಟನೆಯಲ್ಲಿ ತೊಡಗಿರುವುದು ಕಂಡುಬರುತ್ತಿದೆ. ಕೆಲವು ದಿನದಿಂದ ಇಂಥ ಚಟುವಟಿಕೆ ಹೆಚ್ಚಾಗಿದ್ದು, ಮಹಿಳೆಯರ ತಂಡ ವಿವಿಧ ಕಡೆಗಳಲ್ಲಿ ತೆರಳಿ ಭಿಕ್ಷಾಟಣೆಯಲ್ಲಿ ತೊಡಗಿದೆ.
ಮಹಿಳೆಯರ ಪೂರ್ವಾಪರದ ಬಗ್ಗೆ ಕೆಲವರು ವಿಚಾರಿಸಲು ಮುಂದಾದಾಗ ತಪ್ಪಿಸಿಕೊಂಡು ಓಡಿದ್ದಾರೆ. ಹಲವು ಮಹಿಳೆಯರು ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಬಿಸಿಲಿನಲ್ಲಿ ತಿರುಗಾಡುತ್ತಿದ್ದಾರೆ. ಅವರ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ. ಹೀಗಾಗಿ ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕ್ಕೆ ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

coorg buzz
coorg buzz