ಕೊಡಗು: ಕಳೆದ 24 ಗಂಟೆಗಳಲ್ಲಿ ಮಳೆ ಅಬ್ಬರ ಹೇಗಿತ್ತು ನೋಡಿ

heavy rainfall

Share this post :

coorg buzz

ಮಡಿಕೇರಿ:- ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 22.69 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 42.70 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1877.04 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1707.65 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 36.05 ಮಿ.ಮೀ. ಕಳೆದ ವರ್ಷ ಇದೇ ದಿನ 51.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2843.61 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2373.70 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 15.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1769.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1606.05 ಮಿ.ಮೀ. ಮಳೆಯಾಗಿತ್ತು.

ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 31.02 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1783.70 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1610.13 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 34.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 91.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2028.92 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1872.81 ಮಿ.ಮೀ. ಮಳೆಯಾಗಿತ್ತು.

ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 15.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 959.29 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1075.60 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 40, ನಾಪೋಕ್ಲು 12.20, ಸಂಪಾಜೆ 54, ಭಾಗಮಂಡಲ 38, ವಿರಾಜಪೇಟೆ 15, ಅಮ್ಮತ್ತಿ 15.50, ಹುದಿಕೇರಿ 11.40, ಶ್ರೀಮಂಗಲ 16.40, ಪೊನ್ನಂಪೇಟೆ 10, ಬಾಳೆಲೆ 11, ಸೋಮವಾರಪೇಟೆ 26, ಶನಿವಾರಸಂತೆ 23, ಶಾಂತಳ್ಳಿ 70, ಕೊಡ್ಲಿಪೇಟೆ 18, ಕುಶಾಲನಗರ 9.20, ಸುಂಟಿಕೊಪ್ಪ 22.20 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (24-07-2025) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2856.50 ಅಡಿಗಳು. ಕಳೆದ ವರ್ಷ ಇದೇ ದಿನ 2856.27 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 9.20 ಮಿ.ಮೀ., ಕಳೆದ ವರ್ಷ ಇದೇ ದಿನ 22.20 ಮಿ.ಮೀ., ಇಂದಿನ ನೀರಿನ ಒಳಹರಿವು 6343 ಕ್ಯುಸೆಕ್, ಕಳೆದ ವರ್ಷ ಇದೇ ದಿನ 9288 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 5812 ಕ್ಯುಸೆಕ್. ನಾಲೆಗೆ 350 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 7104 ಕ್ಯುಸೆಕ್.