ದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ & ಗ್ಯಾಂಗ್‌ನ ಜಾಮೀನು ರದ್ದಾಗಿದೆ.
ನಟ ದರ್ಶನ್(Darshan) ಹಾಗೂ ಪವಿತ್ರಾ ಗೌಡ (Pavithra Gowda) ಸೇರಿ ಎಲ್ಲಾ ಆರೋಪಿಗಳ ಜಾಮೀನು (Bail) ರದ್ದು ಮಾಡಬೇಕೆಂದು ಕೋರಿ ಕರ್ನಾಟಕ ಪೊಲೀಸರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಇಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿದೆ.
ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿರುವ ನ್ಯಾಯಾಲಯ, ತಕ್ಷಣದಲ್ಲೇ ಬಂಧಿಸಿ ಜೈಲಿಗೆ ಕಳುಹಿಸುವಂತೆ ಹೇಳಿದೆ. ಹೈಕೋರ್ಟ್ ನೀಡಿದ್ದ ತೀರ್ಪಿನ ಬಗ್ಗೆ ಅಸಮಾಧಾನವನ್ನ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ್ದು, ಹೈಕೋರ್ಟ್ ಮಾಡಿದ ತೀರ್ಪನ್ನು ನಾವು ಮಾಡೋದಿಲ್ಲ ಎಂದು ಹೇಳಿದೆ.



