ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ: ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?

Rohit Sharma

Share this post :

ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇದು ಈಗ ದೀರ್ಘ ಕಾಲದಿಂದ ನಿವೃತ್ತಿ ಬಗ್ಗೆ ಇರುವ ಊಹಾಪೋಹಗಳಿಗೆ ಅಂತ್ಯ ಹಾಡಿದೆ. ಹಿಟ್‌ ಮ್ಯಾನ್‌ ಎಂದೇ ಖ್ಯಾತಿ ಪಡೆದಿರುವ ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದೆ. ಇನ್ನ್ಮುಂದೆ ಏಕದಿನ ಮಾದರಿಯಲ್ಲಿ ಮಾತ್ರ ದೇಶದ ಪರವಾಗಿ ಸ್ಫೋಟಕ ಬ್ಯಾಟ್ಸ್‌ಮನ್‌ ಅಬ್ಬರಿಸಲಿದ್ದಾರೆ.

ಟೆಸ್ಟ್ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಹಿಟ್‌ ಮ್ಯಾನ್‌ ರೋಹಿತ್ ಶರ್ಮಾ 67 ಟೆಸ್ಟ್‌ಗಳಲ್ಲಿ 40.57 ಸರಾಸರಿಯಲ್ಲಿ 4301 ರನ್ ಗಳಿಸಿದ್ದಾರೆ. ಇದರಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳಿವೆ. ರೋಹಿತ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡಕ್ಕೆ ಹೊಸ ಟೆಸ್ಟ್ ನಾಯಕ ಸಿಗುತ್ತಾರೆ.

2024-25ರ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ಅವರ ಟೆಸ್ಟ್ ಕ್ರಿಕೆಟ್ ಭವಿಷ್ಯದ ಬಗ್ಗೆ ಊಹಾಪೋಹಗಳಿಗೆ ಇದಕ್ಕೀಗ ಭಾರತ ತಂಡದ ನಾಯಕ ತೆರೆ ಎಳೆದಿದ್ದಾರೆ. ಜೂನ್‌ನಲ್ಲಿ ಪ್ರಾರಂಭವಾಗಲಿರುವ ಇಂಗ್ಲೆಂಡ್‌ ವಿರುದ್ಧದ ಮುಂಬರುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಹೊಸ ನಾಯಕನನ್ನು ಹೊಂದಲಿದೆ.

ವೇಗದ ಬೌಲರ್‌ ಜಸ್‌ಪ್ರಿತ್‌ ಬುಮ್ರಾ, ಅನುಭವಿ ಬ್ಯಾಟರ್‌ ಕೆ.ಎಲ್. ರಾಹುಲ್, ಯುವ ತಾರೆ ಶುಭಮನ್ ಗಿಲ್ ಮತ್ತು ವಿಕೆಟ್ ಕೀಪರ್‌ ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಅವರ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ. ಮೂಲಗಳ ಪ್ರಕಾರ, ಇದೀಗ ಮೈದಾನದಲ್ಲಿ ವಿಜೃಂಭಿಸುತ್ತಿರುವ ಯು ಬ್ಯಾಟರ್‌ ಶುಭಮನ್ ಗಿಲ್ ಅವರು ಭಾರತ ಟೆಸ್ಟ್ ತಂಡದ ನಾಯಕನಾಗುವ ಸಾಧ್ಯತೆ ಹೆಚ್ಚು.