ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ತಮಿಳುನಾಡಿನಲ್ಲಿ ಆರ್.ಎಸ್.ಎಸ್. ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ.
ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು. ಪ್ರಿಯಾಂಕ ಖರ್ಗೆಯವರಿಗೆ ರಕ್ಷಣೆ ಒದಗಿಸಲಾಗುವುದು ಎಂದರು.
*ಬೆದರಿಕೆಗೆ ಹೆದರುವುದಿಲ್ಲ*
ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ ಅವರು ಹೆದರುವುದಿಲ್ಲ. ನಾನೂ ಹೆಸದರುವುದಿಲ್ಲ ಎಂದರು.



