ಗೋಣಿಕೊಪ್ಪ : ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಣ್ಣುವಂಡ ಕಿಶೋರ್ ನಾಚಪ್ಪ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ನೂತನ ಆಡಳಿತ ಮಂಡಳಿ ಆಯ್ಕೆ ಸಂಬಂಧ ಇಂದು ಚುನಾವಣೆ ನಿಗಧಿಯಾಗಿತ್ತು. ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಚ್ಚಮಾಡ ಅನೀಶ್ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಎನ್.ಎನ್. ದಿನೇಶ್, ಖಜಾಂಚಿಯಾಗಿ ವಿ.ವಿ. ಅರುಣ್ ಕುಮಾರ್, ಕಾರ್ಯದರ್ಶಿ ಮಂಡೇಡ ಎಸ್. ಅಶೋಕ್, ನಿರ್ದೇಶಕರಾಗಿ ಅಣ್ಣೀರ ಹರೀಶ್ ಮಾದಪ್ಪ, ಚಿಮ್ಮಣಮಾಡ ದರ್ಶನ್ ದೇವಯ್ಯ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ವಿ.ಕೆ. ಪ್ರತಾಪ್, ಸಹಾಯಕರಾಗಿ ಬಿ.ಇ. ಕಿರಣ್, ವೀಕ್ಷಕರಾಗಿ ಸುನಿಲ್ ಪೊನ್ನೇಟಿ ಕಾರ್ಯನಿರ್ವಹಿಸಿದರು.



