ರಾಜ್ಯದ ಖ್ಯಾತ ಪತ್ರಕರ್ತ ಕಲ್ಯಾಟಂಡ ಬಿ. ಗಣಪತಿ(86) ನಿಧನರಾಗಿದ್ದಾರೆ. ಮೈಸೂರು ಭಾಗದ ಜನಪ್ರಿಯ ಪತ್ರಿಕೆ ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರು ಸಂಪಾದಕರಾಗಿದ್ದ ಇವರು, 5 ದಶಕಗಳಿಂದ ಮೈಸೂರಿನಲ್ಲಿ ಪತ್ರಿಕೋದ್ಯಮಿಯಾಗಿ ಖ್ಯಾತಿ ಗಳಿಸಿದ್ದರು. ಇಂಗ್ಲೀಷ್ ಹಾಗೂ ಕನ್ನಡ ಭಾಷೆಯಲ್ಲಿ ಅಪಾರ ಜ್ಞಾನ ಹೊಂದಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಇವರ ನಿಧನಕ್ಕೆ ಪತ್ರಕರ್ತರ ಸಂಘಟನೆಗಳು, ಪತ್ರಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.
