ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ..!

Share this post :

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಖಾಸಗಿ ಕಾರ್‌ನಲ್ಲಿ ಲೋಕಭವನಕ್ಕೆ ತೆರಳಿದ ಅವರು ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ತುರ್ತು ಕಾರ್ಯನಿಮಿತ್ತ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಇಂಧೋರ್‌ಗೆ ತೆರಳಿರುವ ಕಾರಣಕ್ಕೆ ಅವರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿ ಪ್ರಭುಶಂಖರ್‌ ಅವರಿಗೆ ರಾಜೀನಾಮೆ ಸಲ್ಲಿಕೆಯಾಗಿದೆ. ಸಿದ್ದರಾಮಯ್ಯ ಅವರ ಜೊತೆ ಡಿ.ಕೆ. ಶಿವಕುಮಾರ್‌ ಜೊತೆಗಿದ್ದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅರ್ಧಾವಧಿ ಬಳಿಕ ಡಿ.ಕೆ. ಶಿವಕುಮಾರ್‌ ಅವರಿಗೆ ಸ್ಥಾನ ಬಿಟ್ಟು ಕೊಡುವ ಬಗ್ಗೆ ಒಪ್ಪಂದವಾಗಿತ್ತು. ಕೆಲವು ದಿನದ ಹಿಂದೆ ಹೈಕಮಾಂಡ್‌ ಇಬ್ಬರು ನಾಯಕರನ್ನು ಕರೆಸಿ ಮಾತುಕತೆ ನಡೆಸಿತ್ತು. ಬಹಳ ತಿಂಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಚರ್ಚೆಗೆ ಒಂದು ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ.

coorg buzz
WhatsApp Image 2026-08-11 at 16.11.22