ಸಿಎಂ ಸ್ಥಾನಕ್ಕಾಗಿ ಹಗ್ಗಜಗ್ಗಾಟ : ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದ ಸಿದ್ದರಾಮಯ್ಯ

Share this post :

ಬೆಂಗಳೂರು : ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಸುತ್ತಾ ಈ ಮಾತು ಹೇಳಿದರು. ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ತಿಳಿಸಿರುತ್ತಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದೇನೆ. ಹಾಗಾಗಿ ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ ಎಂದರು.

coorg buzz
coorg buzz