ವಿರಾಜಪೇಟೆ (Virajpet) 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆಎಸ್‍ಆರ್‍ಟಿಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಜುಲೈ, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ಗೋಣಿಕೊಪ್ಪ ರಸ್ತೆ, ಪಂಜರಪೇಟೆ, ವಿದ್ಯಾನಗರ, ಕೆಎಸ್‍ಆರ್‍ಟಿಸಿ, ಶಾಂತಿನಗರ, ಸುಭಾಶ್‍ನಗರ, ಮೀನುಪೇಟೆ, ಹೆಗ್ಗಳ, ಬೇಟೋಳಿ, ಆರ್ಜಿ, ರಾಮನಗರ, ತೋರ, ಬೂದಿಮಾಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
