Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Power Cut

Share this post :

ಸೋಮವಾರಪೇಟೆ (Somwarpet) 66/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಫೀಡರ್ ಮಾರ್ಗದಲ್ಲಿ ಮೇ, 05 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ, ಯಡೂರು, ತಲ್ತಾರೆಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರುಶೆಟ್ಟಳ್ಳಿ, ಕೂತಿ, ಹೊಸಬೀಡು, ಕಲ್ಕಂದೂರು, ಬಸವನಕಟ್ಟೆ, ನಗರಳ್ಳಿ, ಹೆಮನಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (power cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.