ಕುಶಾಲನಗರದ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಮಾರಕಾಸ್ತ್ರ ಹಿಡಿದು ರಿಲ್ಸ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದ ವಿದ್ಯಾರ್ಥಿ ಈಗ ಕ್ಷಮೆ ಯಾಚಿಸಿದ್ದಾನರೆ.
ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ಕಾಲೇಜಿನೊಳಗೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ, ಇದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾಲೇಜು ಪ್ರಾಂಶುಪಾಲರು ಹಾಗೂ ಆಡಳಿತ ವ್ಯವಸ್ಥೆ ವಿರುದ್ಧ ಕೂಡ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಮಾತ್ರವಲ್ಲ ಈ ಬಗ್ಗೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತ ವಿದ್ಯಾರ್ಥಿ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚಿಸಿದ್ದಾನೆ.



