ಮೈಕ್ರೋ ಫೈನಾನ್ಸಿಯರ್ (Micro Finance) ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ನಾವು ಕಠಿಣ ಕಾನೂನನ್ನು ಜಾರಿ ಮಾಡಿದ ನಂತರದಿಂದ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂಬುದನ್ನು ಕೂಡ ಇದೇ ವೇಳೆ ನಿಮ್ಮೆಲ್ಲರ ಗಮನಕ್ಕೆ ತರಬಯಸುತ್ತೇನೆ ಎಂದರು. ಸದನದಲ್ಲಿ ನಡೆದ ಪ್ರಶ್ನೋತ್ತರ ವೇಳೆ ಸದಸ್ಯರ ಪ್ರಶ್ನೆಗೆ ಮುಖ್ಯಮಂತ್ರಿ ಉತ್ತರಿಸಿದರು.



