ಕಸ್ತೂರಿ ರಂಗನ್‌ ವರದಿ ಅಂತಿಮ ಕರಡು ಅಧಿಸೂಚನೆ – ಆತಂಕ ಬೇಡ ಎಂದ ಸಂಸದ ಯದುವೀರ್‌

ಮಡಿಕೇರಿ : ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಜನ ಆತಂಕಕ್ಕೀಡಾಗಬೇಕಾದ ಅಗತ್ಯವಿಲ್ಲ ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದರು. ಮಡಿಕೇರಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಾಗುತ್ತಿದೆ. ಕೊಡಗಿನ ಜನ ಪ್ರಕೃತಿಯನ್ನು ರಕ್ಷಿಸುವ, ಗೌರವಿಸುವ ಗುಣ ಹೊಂದಿದ್ದಾರೆ. ಜನವಸತಿ ಹಾಗೂ ಕೃಷಿ ಪ್ರದೇಶವನ್ನು ವರದಿ ವ್ಯಾಪ್ತಿಗೆ ಸೇರಿಸಬಾರದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಈ ವಿಚಾರದಲ್ಲಿ ಕಾರ್ಯನಿರ್ವಹಣೆ ಮಾಡಬೇಕೆಂದು ಅಭಿಪ್ರಾಯಪಟ್ಟರು. ಕಸ್ತೂರಿ ರಂಗನ್ ವರದಿ ಯಥಾವತ್ ಅನುಷ್ಠಾನ ಅಸಾಧ್ಯ. […]

ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಪರಿಶೀಲನೆ ಆರಂಭ, ದಾಖಲೆ ಕಡ್ಡಾಯ!

Gruha Jyothi

ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯ ಅರ್ಹ ಫಲಾನುಭವಿಗಳ ಪುನರ್ ಪರಿಶೀಲನಾ ಕಾರ್ಯ ಜುಲೈ 1 ರಿಂದ ಅಧಿಕೃತವಾಗಿ ಆರಂಭವಾಗಲಿದೆ. ಸಿಬ್ಬಂದಿ ನೇರವಾಗಿ ಗ್ರಾಹಕರ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಕಳೆದ 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿದ್ದ ಗೃಹ ಜ್ಯೋತಿ ಯೋಜನೆಯ ಅರ್ಹತೆಯನ್ನು ಮರು ಪರಿಶೀಲಿಸುವ ಉದ್ದೇಶದಿಂದ ಇಂಧನ ಇಲಾಖೆ ಈ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಸ್ಥಳದಲ್ಲೇ ದಾಖಲೆ ಪರಿಶೀಲನೆ, ಆಪ್ ಮೂಲಕ ಮಾಹಿತಿ ಸಂಗ್ರಹ ಸೆಸ್ಕ್ ಮೀಟರ್ ರೀಡರ್‍ಗಳು ಹಾಗೂ […]