ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಡಗು ಜಿಲ್ಲಾ ಬಿಜೆಪಿ ಅಹೋರಾತ್ರಿ ಧರಣಿ

ಮಡಿಕೇರಿ: ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚಬಾರದು, ಪರಿಶಿಷ್ಟ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆಡೆಗೆ ಬಳಸದಿರಿ, ಕಾಫಿ ಉತ್ಪಾದನೆ ಕುಂಠಿತವಾಗಿದ್ದು ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯ ಹಳೆಯ ಖಾಸಗಿ ಬಸ್‌ನಿಲ್ದಾಣದಲ್ಲಿ ಅಹೋರಾತ್ರಿ ಧರಣಿ ಪ್ರಾರಂಭಿಸಿದೆ. ಒಂದು ವೇಳೆ ಬೇಡಿಕೆಗಳು ಈಡೇರದೇ ಹೋದರೆ ಮಾರ್ಚ್ 11ರಂದು ಕೊಡಗು ಜಿಲ್ಲಾ ಬಂದ್‌ಗೆ ಕರೆ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಬಿಜೆಪಿ ಹೇಳಿದೆ. ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚದೇ ಉಳಿಸಬೇಕು, ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ […]