ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ಕೊಡಗಿನ ಪ್ರತೀಕ್ಷಾ ರಾಜ್ಯಕ್ಕೆ 6ನೇ ಸ್ಥಾನ

ಮಡಿಕೇರಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯ ಮೂಲದ ವಿದ್ಯಾರ್ಥಿನಿ ರಾಜ್ಯಕ್ಕೆ 6ನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಕುಶಾಲನಗರದ ಪ್ರತೀಕ್ಷಾ (Pratheeksha) ಎಸ್ 594/600 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಗಳಿಸಿದ್ದಾರೆ. ಬೆಳ್ತಂಗಡಿಯ ಎಕ್ಸೆಲ್ ಪಿ.ಯು. ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಈಕೆ ಕುಶಾಲನಗರದ ಶಿಕ್ಷಕಿ ಭವ್ಯ & ಮಾಜಿ ಸೈನಿಕ ಸುಧೀರ್ ಕುಮಾರ್ ಅವರ ಪುತ್ರಿ. ಇಂಗ್ಲೀಷ್‌ನಲ್ಲಿ 98, ಸಂಸ್ಕೃತ 100, ಭೌತಶಾಸ್ತ್ರ 100, ರಸಾಯನಶಾಸ್ತ್ರ 96, ಲೆಕ್ಕಶಾಸ್ತ್ರ 100, ಜೀವಶಾಸ್ತ್ರದಲ್ಲಿ 100 […]
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಕೊಡಗು ಜಿಲ್ಲೆಗೆ ಯಾರು ಟಾಪರ್ಸ್? ಇಲ್ಲಿದೆ ವಿವರ

2024–25 ನೇ ಸಾಲಿನ ದ್ವಿತೀಯ ಪಿಯುಸಿ (2nd PUC) ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಶೇ 83.84 ರಷ್ಟು ಫಲಿತಾಂಶ ದಾಖಲಿಸಿದ್ದು, ರಾಜ್ಯದಲ್ಲಿ ಕೊಡಗು ಜಿಲ್ಲೆ 4 ನೇ ಸ್ಥಾನ ಗಳಿಸಿದೆ. 2024 ರ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಜಿಲ್ಲೆಯು 5 ಸ್ಥಾನದಿಂದ 4 ನೇ ಸ್ಥಾನವನ್ನು ಪಡೆದಿದೆ. ಜಿಲ್ಲೆಯಲ್ಲಿ 4697 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3938 ಮಂದಿ ತೇರ್ಗಡೆಯಾಗಿದ್ದಾರೆ. ಪರೀಕ್ಷೆಗೆ ಕುಳಿತಿದ್ದ 2,320 ಬಾಲಕರಲ್ಲಿ 1750 ಬಾಲಕರು ಉತ್ತೀರ್ಣರಾಗಿ 75.43 ರಷ್ಟು ಫಲಿತಾಂಶ ಪಡೆದಿದ್ದಾರೆ. […]
2nd PUC Result: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ (2nd PUC) ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದ್ದಾರೆ. ವೆಬ್ಸೈಟ್ನಲ್ಲಿಯೂ ಫಲಿತಾಂಶ ಲಭ್ಯವಿದೆ. ಉಡುಪಿ ಜಿಲ್ಲೆ ಈ ಬಾರಿ ಪ್ರಥಮ ಸ್ಥಾನ ಪಡೆದರೆ ಕೊಡಗು ಜಿಲ್ಲೆ 4ನೇ ಸ್ಥಾನ (ಶೇ.83.84) ಹಾಗೂ ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಮಧ್ಯಾಹ್ನ 12.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಿದ್ದಾರೆ. karresults.nic.in ಹಾಗೂ […]