Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಮಡಿಕೇರಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಎಫ್1 ಕೋಟೆ ಮಾರ್ಗದಲ್ಲಿ ಅಭಿವೃದ್ದಿ ಕಾಮಗಾರಿ ಕೈಗೊಂಡಿರುವುದರಿಂದ ಏಪ್ರಿಲ್ 16 (ನಾಳೆ) ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಮಡಿಕೇರಿಯ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.
ಮಡಿಕೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಪ್ರಕಟ

ಮಡಿಕೇರಿ (Madikeri) ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಏಪ್ರಿಲ್ 28 ರಂದು ಸೋಮವಾರದಂದು ಚುನಾವಣೆವಣೆ ನಡೆಯಲಿದೆ. ದಿನಾಂಕ ನಿಗಧಿ ಪಡಿಸಿದ ನಗರದಭೆ ಆಡಳಿತಾಧಿಕಾರಿ ಮತ್ತು ಜಿಲ್ಲಾಧಿಕಾರಿ ವೆಂಕಟ ರಾಜಾ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲು.
ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ದರೋಡೆ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಮಡಿಕೇರಿಯಲ್ಲಿ (Madikeri) ಒಂಟಿ ಮಹಿಳೆ ವಾಸವಾಗಿದ್ದ ಮನೆಗೆ ನುಗ್ಗಿ ಹಲ್ಲೆ ಮಾಡಿ ಚಿನ್ನದ ಕರಿಮಣಿ ಸರ ಮತ್ತು ಉಂಗುರ ದರೋಡೆ ಮಾಡಿದ್ದ ಆರೋಪಿಗೆ ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ, 15 ಸಾವಿರ ದಂಡ ಹಾಗೂ ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇಬ್ಬನಿ ರೆಸಾರ್ಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (35) ಎಂಬಾತ ಶಿಕ್ಷೆಗೊಳಗಾದವನಾಗಿದ್ದಾನೆ. ಆರೋಪಿ […]
ಕೊಡಗಿನ ಹಲವೆಡೆ ಲಘು ಭೂಕಂಪನ ಅನುಭವ!

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬಳಿ ಮಂಗಳವಾರ ಬೆಳಗ್ಗೆ ಲಘು ಭೂಕಂಪನ ಅನುಭವವಾಗಿದೆ. ಅದೃಷ್ಟವಶಾತ್ ಯಾವುದೇ ರೀತಿಯಲ್ಲಿ ಹಾನಿ, ಸಾವು-ನೋವು ಸಂಭವಿಸಿಲ್ಲ. ಮಡಿಕೇರಿಯ (Madikeri) ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 1.6 ಮ್ಯಾಗ್ನಿಟ್ಯೂಡ್ ತೀವ್ರತೆಯ ಭೂಕಂಪ ಬೆಳಿಗ್ಗೆ ಗಂಟೆ 10:49:05 ಕ್ಕೆ ಸಂಭವಿಸಿದೆ. ಭೂಕಂಪ ಆಗಲು ಬೇರೆ ಬೇರೆ ಕಾರಣಗಳಿವೆ. ಭೂಕಂಪಗಳನ್ನು […]