ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ವಿರಾಜಪೇಟೆ: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಉತ್ಸವ ಹಾಗೂ ವನದುರ್ಗೆ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಶ್ರದ್ಧಾ-ಭಕ್ತಿಯಿಂದ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನ ಮೂರ್ತಿ ಭಟ್ ಅವರ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭವಾದವು. ಮೊದಲಿಗೆ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ ಹಾಗೂ ಶ್ರೀ ನಾಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. […]

ಏಪ್ರಿಲ್ 25 ರಿಂದ ಗುಂಡಿಕೆರೆ ಮಖಾo ಉರೂಸ್

ವಿರಾಜಪೇಟೆ ಸಮೀಪದ ಗುಂಡಿಕೆರೆ ಮಖಾo ಉರೂಸ್ ಕಾರ್ಯಕ್ರಮವನ್ನು 2027ರ ಏಪ್ರಿಲ್ 25ರಿಂದ ಆರಂಭಿಸುವಂತೆ ನಿರ್ಧರಿಸಲಾಗಿದೆ. ಏ. 25 ರಿಂದ 27ರವರೆಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗುಂಡಿಕೆರೆ ಉರೂಸ್ ನಡೆಯಲಿದೆ ಎಂದು ಗುಂಡಿಕೆರೆ ಶಾಫಿ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ನ.21, 22ರಂದು ವಿರಾಜಪೇಟೆಯಲ್ಲಿ ‘ಕೂರ್ಗ್ ಮಾಸ್ಟರ್ಸ್ ಕಪ್ 50+’ ಕಾಲ್ಚೆಂಡು ಪಂದ್ಯಾವಳಿ

ವಿರಾಜಪೇಟೆ: ಕೂರ್ಗ್ ಮಾಸ್ಟರ್ಸ್ ಕಪ್ ವತಿಯಿಂದ ಮೂರನೇ ವರ್ಷದ 50+ ಕಾಲ್ಚೆಂಡು ಪಂದ್ಯಾಟವು ನವೆಂಬರ್ 21 ಮತ್ತು 22ರಂದು ವಿರಾಜಪೇಟೆಯ ತಾಲೂಕು ಆಟದ ಮೈದಾನದಲ್ಲಿ ಹೊನಲು ಬೆಳಕಿನಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಕೂರ್ಗ್ ಮಾಸ್ಟರ್ಸ್ ಕಪ್ ಅಧ್ಯಕ್ಷ ಎಲ್.ಜಿ. ಭಾಸ್ಕರ್ ತಿಳಿಸಿದ್ದಾರೆ. ವಿರಾಜಪೇಟೆಯ ಪತ್ರಕರ್ತರ ವೇದಿಕೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಯಶಸ್ವಿಯಾಗಿ ಪಂದ್ಯಾಟವನ್ನು ಆಯೋಜಿಸಿಕೊಂಡು ಬರುತ್ತಿದ್ದು, ಈ ಬಾರಿ ಮೂರನೇ ವರ್ಷದ ಪಂದ್ಯಾಟವನ್ನು ಇನ್ನಷ್ಟು ವಿಶೇಷವಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. […]

ವಿರಾಜಪೇಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ವಿರಾಜಪೇಟೆ: ಯುವಶಕ್ತಿಯು ದೇಶದ ಭವಿಷ್ಯವಾಗಿದ್ದು, ವಿದ್ಯಾರ್ಥಿಗಳು ಶಿಸ್ತು ಮತ್ತು ಆತ್ಮವಿಶ್ವಾಸವನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ನಿವೃತ್ತ ಪ್ರಾಂಶುಪಾಲ ತಾತಂಡ ಜ್ಯೋತಿ ಪ್ರಕಾಶ್ ಕರೆ ನೀಡಿದರು. ವಿರಾಜಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಸಂಘವು ನಾಯಕತ್ವದ ಮನೋಭಾವನೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಕಾಲೇಜಿನ ಎಲ್ಲಾ ಶೈಕ್ಷಣಿಕ ಮತ್ತು ಪಠ್ಯೇತರ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕಿವಿಮಾತು ಹೇಳಿದರು. […]

ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಕೊಡಗು ಘಟಕದ ಪದಗ್ರಹಣ, ಸಾಧಕರಿಗೆ ಪ್ರಶಸ್ತಿ ಪ್ರದಾನ

ವಿರಾಜಪೇಟೆ: ಕಲೆ ಮತ್ತು ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ಅತ್ಯುತ್ತಮ ವೇದಿಕೆಯಾಗಿದ್ದು, ನೌಕರರು ತಮ್ಮ ಪ್ರತಿಭೆಗಳನ್ನು ಹೊರತರಲು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕ ಡಾ. ರಘುನಾಥ್ ಬಿ.ಎನ್. ತಿಳಿಸಿದರು. ವಿರಾಜಪೇಟೆಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಪದಗ್ರಹಣ ಹಾಗೂ ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲೆ-ಸಂಸ್ಕೃತಿ […]

ಕೊಡವ ಪೊಮ್ಮಕ್ಕಡ ಒಕ್ಕೂಟದಿಂದ ಸಂಭ್ರಮದ ‘ಕಕ್ಕಡ ನಮ್ಮೆ’ ಆಚರಣೆ

Kodava Samaja

ಕೊಡವ ಪೊಮ್ಮಕ್ಕಡ ಒಕ್ಕೂಟ ಕೊಡವ ಸಮಾಜ ವಿರಾಜಪೇಟೆ ಇದರ ವತಿಯಿಂದ ಕೊಡವ ಸಮಾಜದಲ್ಲಿ 2026-27ನೇ ಸಾಲಿನ ‘ಕಕ್ಕಡ ನಮ್ಮೆ’ ಆಚರಣೆಯನ್ನು ಪೊನ್ನಕ್ಕ ತಂಡದವರ ಸಹಯೋಗದೊಂದಿಗೆ ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ ಅವರು, ಚಳಿ-ಮಳೆಯೆನ್ನದೆ ಪ್ರತಿಯೊಬ್ಬರೂ ತಮ್ಮ ಮನೆಯ ಕೆಲಸಗಳನ್ನು ತಾವೇ ಮಾಡಿಕೊಳ್ಳಬೇಕು ಹಾಗೂ ದೈಹಿಕ ಚಟುವಟಿಕೆಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಕಕ್ಕಡ ನಮ್ಮೆಯ ಸಂದರ್ಭದಲ್ಲಿ 18 ತರಹದ ಔಷಧೀಯ ಗುಣಗಳನ್ನು […]

ಕೊಡಗು ಸಾಹಿತ್ಯ ಪರಿಷತ್: ಆ.8ಕ್ಕೆ ಪದಗ್ರಹಣ ಹಾಗೂ ಪ್ರಶಸ್ತಿ ಪ್ರದಾನ

ವಿರಾಜಪೇಟೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮವು ಆಗಸ್ಟ್ 8 ರಂದು ಮಧ್ಯಾಹ್ನ 2:00 ಗಂಟೆಗೆ ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ನೆರವೇರಲಿದೆ. ಮಡಿಕೇರಿ ಜಿಲ್ಲಾ ಖಜಾನೆ ಉಪ ನಿರ್ದೇಶಕರಾದ ಡಾ. ರಘುನಾಥ ಬಿ. ಎನ್. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು ಪ್ರಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಘಟಕದ ಮಹಾ ಪೋಷಕ ಮಲ್ಲಿಕಾರ್ಜುನ ತೊದಲಬಾಗಿ, ಗೌರವಾಧ್ಯಕ್ಷ ಎಲ್.ಐ. ಲಕ್ಕಮ್ಮನವರ್, ರಾಜ್ಯಾಧ್ಯಕ್ಷೆ ರಮಾ […]

ಮನೆಗಳಿಂದಲೇ ಆರಂಭವಾಗಲಿ ಪರಿಸರ ಸ್ವಚ್ಛತೆಯ ಜಾಗೃತಿ: ವಿರಾಜಪೇಟೆಯಲ್ಲಿ ಅರ್ಥಪೂರ್ಣ ‘ವನಮಹೋತ್ಸವ’

Tree Plantation

ವಿರಾಜಪೇಟೆ: ಪರಿಸರ ಸ್ವಚ್ಛತೆ ಮತ್ತು ಸಂರಕ್ಷಣೆಯ ಪರಿಪಾಠವು ಪ್ರತಿಯೊಬ್ಬರ ಮನೆಗಳಿಂದಲೇ ಆರಂಭವಾಗಬೇಕು. ಮನೆಯಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿದಾಗ ಮಾತ್ರ ಸಮಾಜದಲ್ಲಿಯೂ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ ಎಂದು ವಿರಾಜಪೇಟೆ ತಾಲೂಕು ತಹಸಿಲ್ದಾರ್ ಪ್ರವೀಣ್ ಕುಮಾರ್ ಅವರು ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆಯ ತಾಲೂಕು ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ, ವಿರಾಜಪೇಟೆ ಪತ್ರಕರ್ತರ ವೇದಿಕೆ, ನ್ಯೂಸ್ 3 ಡಿಜಿಟಲ್ ಮೀಡಿಯಾ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ವನಮಹೋತ್ಸವ’ ಕಾರ್ಯಕ್ರಮದಲ್ಲಿ […]

ಉಪನ್ಯಾಸಕಿ ದಮಯಂತಿ ತಿಮ್ಮಯ್ಯಗೆ ‘ಕನ್ನಡ ಪಯಶ್ವಿನಿ ಶಿಕ್ಷಣ ರತ್ನ’ ಪ್ರಶಸ್ತಿ ಪ್ರಧಾನ

Damayanthi Thimmaiah

ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ದಿನಾಂಕ 26.07.2026 ರಂದು ನಡೆದ “ಕನ್ನಡ ಗಡಿನಾಡು ಸಮ್ಮೇಳನ-2026” ಹಾಗೂ ಕನ್ನಡ ಭವನ ಮತ್ತು ಗ್ರಂಥಾಲಯದ ರಜತ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಶ್ರೀಮತಿ ಕಾಳೆಂಗಡ ದಮಯಂತಿ ತಿಮ್ಮಯ್ಯ ಅವರಿಗೆ ಪ್ರತಿಷ್ಠಿತ “ಕನ್ನಡ ಪಯಶ್ವಿನಿ ಶಿಕ್ಷಣ ರತ್ನ ಅಚೀವ್ ಮೆಂಟ್ ಅವಾರ್ಡ್-2026” ನೀಡಿ ಗೌರವಿಸಲಾಯಿತು. ಶಿಕ್ಷಣ, ಬರಹ ಹಾಗೂ ಕನ್ನಡ ಕ್ಷೇತ್ರಕ್ಕೆ ಸಲ್ಲಿಸಿದ 30 ವರ್ಷಗಳ ಗಣನೀಯ ಸೇವೆಯನ್ನು ಪರಿಗಣಿಸಿ ನೀಡಲಾದ ಈ […]

ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ವಿರಾಜಪೇಟೆ: ಪಟ್ಟಣದ ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯು ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಪಾಲ್ಗೊಂಡಿದ್ದು ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಆಯೋಜಿಸಲಾಗಿತ್ತು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ರವರು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆಯನ್ನು ನೀಡಿದರು. ಬಳಿಕ ಅವರು ಮಾತನಾಡಿ ಸರ್ಕಾರವು ದೇಶಾದ್ಯಂತ ಪೋಲಿಯೋವನ್ನು ನಿರ್ಮೂಲನೆ ಮಾಡಿ ಪೋಲಿಯೋ ಮುಕ್ತ ಭಾರತವನ್ನು ನಿರ್ಮಿಸುವ ಉದ್ದೇಶವನ್ನು ಹೊಂದಿದೆ. ಸರ್ಕಾರ ಹಾಗೂ ಆರೋಗ್ಯ ಇಲಾಖೆಯ […]