FMKMC ಕಾಲೇಜಿಗೆ ಹೊಸ ಚೈತನ್ಯ ತುಂಬಲು ಹಳೆ ವಿದ್ಯಾರ್ಥಿಗಳು ಕೈಜೋಡಿಸಿ – ಪ್ರೊ. ಪಿ.ಎಲ್‌. ಧರ್ಮ ಕರೆ

ಮಡಿಕೇರಿ : ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜು ಹಲವು ಸಾಧಕರಿಗೆ ಶಿಕ್ಷಣ ಕೊಟ್ಟ ಸಂಸ್ಥೆ. ಈ ಕಾಲೇಜಿನ ಈಗಿನ ಪರಿಸ್ಥಿತಿ ನೋಡಿದಾಗ ಬಹಳ ಬೇಸರವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಪಿ.ಎಲ್.‌ ಧರ್ಮ ಹೇಳಿದರು. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ನಾನು ಕೂಡಾ ಈ ಕಾಲೇಜಿನ ಹಳೆ ವಿದ್ಯಾರ್ಥಿ. ದಶಕದ ಹಿಂದೆ ಇದ್ದ ಚಿತ್ರಣ ಈಗ ಇಲ್ಲ. ಹಲವು ರೀತಿಯಲ್ಲಿ ಬದಲಾಗಿದೆ. ಕಾಲೇಜಿನ […]

FMKMCC ಹಳೆ ವಿದ್ಯಾರ್ಥಿ ಸಂಘದಿಂದ ಗುರು ವಂದನಾ ಕಾರ್ಯಕ್ರಮ: ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ

FMKMCC Alumni Association

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು (FMKMCC) ಹಳೆ ವಿದ್ಯಾರ್ಥಿ ಸಂಘದ ಮಾಸಿಕ ಸಭೆ ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಲೇಜಿನ ಅಭಿವೃದ್ಧಿ ಹಾಗೂ ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ನಡೆಯಬೇಕಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ.ಬಿ ಅವರು ಮಾತನಾಡಿ, ಕಾಲೇಜು ಈಗಾಗಲೇ 75 ವರ್ಷಗಳನ್ನು ಪೂರೈಸಿದ್ದು, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದಿಂದ ವಿದ್ಯಾರ್ಥಿಗಳಿಗಾಗಿ ಬಹಳಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಕಾಲೇಜಿನ […]

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸ್ಕಾಲರ್ಶಿಪ್, ಪ್ರತಿಭಾ ಪುರಸ್ಕಾರ ವಿತರಣೆ

Dubai Kodagu Alumni Association

ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೊಡಗಿನ ಹಳೆ ವಿದ್ಯಾರ್ಥಿಗಳ ಸಂಘದ ಅವರ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಎಲ್ಲಾ ವರ್ಷವು ನೀಡಿ ಬರುವ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಕೊಡಗಿಗೆ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಕಾರ್ಯಕ್ರಮ ಫೆ.01 ರಂದು ಹೊದವಾಡದಲ್ಲಿರುವ ರಾಫಲ್ಸ್ […]