ಸಿಂಕೋನ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ – ಸೀಮಂತ ಕಾರ್ಯಕ್ರಮ

ಮಡಿಕೇರಿ : ಪೋಷನ್ ಮಾಸಾಚರಣೆ ಅಂಗವಾಗಿ ಸಿಂಕೋನ ಅಂಗನವಾಡಿ ಕೇಂದ್ರದಲ್ಲಿ ಸೀಮಂತ ಕಾರ್ಯಕ್ರಮ ಮತ್ತು ಅನ್ನಪ್ರಾಶನ ಕಾರ್ಯಕ್ರಮ ನೆರವೇರಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಮಾತನಾಡಿ, ಪೋಷನ್ ಆಚರಣೆಯ ಉದ್ದೇಶ, ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು. ಅತಿಯಾದ ತೂಕ ನಿಯಂತ್ರಣ, ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣದ ಬಗ್ಗೆ, ತೂಕ ಮಹತ್ವದ ಬಗ್ಗೆ ವಿವರವಾಗಿ ತಿಳಿಸಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಅನ್ನಪ್ರಾಶನ ಮತ್ತು […]
ಕಡಗದಾಳು ಅಂಗನವಾಡಿಯಲ್ಲಿ LKG, UKG ಪ್ರಾರಂಭೋತ್ಸವ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ

ಮಡಿಕೇರಿ : ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಪ್ರಾರಂಭೋತ್ಸವ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಕುರಿತಾಗಿ ಮಾತನಾಡಿದ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಐಸಿಡಿಎಸ್ ಸುವರ್ಣ ಮಹೋತ್ಸವದ ಅಂಗವಾಗಿ ಸರ್ಕಾರ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ, ಯುಕೆಜಿಯನ್ನು ಪ್ರಾರಂಭಿಸುತ್ತಿದ್ದು, ಮಡಿಕೇರಿ ತಾಲೂಕಿನ 10 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಯುಕೆಜಿ ಪ್ರಾರಂಭವಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಕಳುಹಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಬೇಕೆಂದರು. ಕಡಗದಾಳು ಗ್ರಾಮ ಪಂಚಾಯಿತಿಯಿಂದ 18 ಮಕ್ಕಳಿಗೆ ಸಮವಸ್ತ್ರ, […]
ಗರವಾಲೆ ಅಂಗನವಾಡಿ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ

ಅಂಗನವಾಡಿ ಸಹಾಯಕಿಯ ಬೇಬಿ ಅಂಗನವಾಡಿಯ ಒಳಗಿದ್ದ ಸಂದರ್ಭದಲ್ಲಿ ಮರ ಬಿದ್ದು ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಲೆ ಹಾಗೂ ಎದೆ ಬಾಗಕ್ಕೆ ಗಾಯಗಳಾಗಿವೆ.
“ಮನರೇಗಾ ಕನಸು ನನಸಾಯಿತು”: ಹೊಸ ಅಂಗನವಾಡಿಗೆ ಶಾಸಕ ಪೊನ್ನಣ್ಣ ಚಾಲನೆ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿರಾಜಪೇಟೆ (Virajpet) ತಾಲ್ಲೂಕಿನ ಕಾರ್ಮಾಡು ಗ್ರಾ.ಪಂ ( Karmadu Gram Panchayat)ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡವನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ (Ponnanna) ಅವರು ಉದ್ಘಾಟಿಸಿದರು. ಅಂಗನವಾಡಿ ಕೇಂದ್ರಗಳು ( Anganwadi Center) ಮಕ್ಕಳ ಪ್ರಾಥಮಿಕ ಹಂತದ ಶಿಕ್ಷಣ ಒದಗಿಸುವ ಒಂದು ಪ್ರಮುಖ ಕೇಂದ್ರಗಳಾಗಿದ್ದು, ಮಕ್ಕಳ ದೈಹಿಕ ಹಾಗೂ ಬೌದ್ದಿಕ ಬೆಳವಳಿಗೆಯು ಸಹ ಅಂಗನವಾಡಿ ಕೇಂದ್ರಗಳಿಂದಲೇ ಪ್ರಾರಂಭವಾಗುತ್ತವೆ. […]