ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ: ಧರ್ಮಜ ಉತ್ತಪ್ಪ

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ಯಾರಂಟಿ (guarantee) ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಸಲಹೆ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಬಗ್ಗೆ ಗುರುವಾರ ಮಾಹಿತಿ ಪಡೆದು ಅವರು ಮಾತನಾಡಿದರು. ಬಡವರಿಗಾಗಿ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ (Anna bhagya scheme )ಯೋಜನೆಯು ಅರ್ಹ ಫಲಾನುಭವಿಗಳಿಗೆ ಕಡ್ಡಾಯವಾಗಿ ತಲುಪಬೇಕು. ಯಾವುದೇ ಕಾರಣಕ್ಕೂ ಬಡವರಿಗೆ ಅನ್ಯಾಯ […]