ಲಾವಣ್ಯ ಬೋರ್ಕರ್‌ಗೆ ಅನರ್ಘ್ಯ ರತ್ನ ರಾಷ್ಟ್ರೀಯ ಪ್ರಶಸ್ತಿ

ವಿರಾಜಪೇಟೆ: ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್ ಲಾವಣ್ಯ ಬೋರ್ಕರ್ ರವರಿಗೆ ಅನರ್ಘ್ಯ ರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆ ಟ್ರಸ್ಟ್ ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವದ ಪ್ರಯುಕ್ತ ಜರುಗಿದ ಸಮಾರಂಭದಲ್ಲಿ ಲಾವಣ್ಯ ಬೋರ್ಕರ್ ರವರ ಕಲಾ ಹಾಗೂ ಭರತನಾಟ್ಯದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಇತ್ತೀಚೆಗೆ ಹಾಸನದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿದ ಸಮಾರಂಭದಲ್ಲಿ […]
ಬಯವಂಡ ರಿಹಾನ್ ಮುತ್ತಣ್ಣಗೆ ತ.ರಾ.ಸು. ಪ್ರಶಸ್ತಿ

ಪೊನ್ನಂಪೇಟೆ: ಬೆಂಗಳೂರಿನ ಜನ್ಮ ಭೂಮಿ ಸಾಂಸ್ಕೃತಿಕ ನಾಗರೀಕ ವೇದಿಕೆಯ ವತಿಯಿಂದ ದ್ವಿತೀಯ ಪಿ.ಯು. ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ತ.ರಾ.ಸು. ಪ್ರಶಸ್ತಿಯನ್ನು ಕೊಡಗಿನ ಬಯವಂಡ ರಿಹಾನ್ ಮುತ್ತಣ್ಣ ಪಡೆದುಕೊಂಡಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಕಾರಣ ಈ ಪ್ರಶಸ್ತಿಗೆ ರಿಹಾನ್ ಮುತ್ತಣ್ಣ ಅವರನ್ನು ಆಯ್ಕೆಗೊಳಿಸಲಾಗಿತ್ತು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶ್ರೀ ಕೃಷ್ಣದೇವರಾಯ ಕಲಾಮಂದಿರದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ರಿಹಾನ್ ಮುತ್ತಣ್ಣ ಅವರಿಗೆ ಈ […]
ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ತಮ್ಮಯ್ಯಗೆ ಅಧ್ಯಾಪಕ ಭೂಷಣ ಪ್ರಶಸ್ತಿ

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ದೈಹಿಕ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಬೇಗೂರು ಕೆಚೆಟ್ಟಿರ .ಎಸ್. ತಮ್ಮಯ್ಯನವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ(ರಿ) ಮಂಗಳೂರು ವಿಭಾಗ ವತಿಯಿಂದ ನೀಡಲಾಗುವ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪನ್ ನಲ್ಲಿ ನಡೆದ ಪ್ರೇರಣ ದಿವಸ್ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ ಚಂದ್ ಗೊಹ್ಲೋಟ್ ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕ್ರೀಡಾ ವಿಭಾಗದಲ್ಲಿ ಇವರ ಮಾರ್ಗದರ್ಶನದಲ್ಲಿ ವಿಧ್ಯಾರ್ಥಿಗಳು ಮಾಡಿದ ಸಾಧನೆಯ ಹಿನ್ನಲೆ ಅತ್ಯುತ್ತಮ ದೈಹಿಕ ನಿರ್ದೇಶಕ ಎಂಬ ನೆಲೆಯಲ್ಲಿ […]
‘ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

ಮಡಿಕೇರಿ:-ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ (Nalwadi Krishnaraja Wadiyar) ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ, ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು ಎಂದು ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಅವರು ಸ್ಮರಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ […]
ಲಾವಣ್ಯ ಬೋರ್ಕರ್ ಗೆ ಡಾ. ಬಿ.ಆರ್.ಅಂಬೇಡ್ಕರ್ ಸದ್ಭಾವನಾ ಪ್ರಶಸ್ತಿ

ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್. ಲಾವಣ್ಯ ಬೋರ್ಕರ್ ರವರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ (Dr. B. R. Ambedkar) ಸದ್ಭಾವನಾ ರಾಷ್ಟ್ರ ಮಟ್ಟದ ಪ್ರಶಸ್ತಿಗೆ (Award) ಭಾಜನರಾಗಿದ್ದಾರೆ. ಅವರು ಭರತನಾಟ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ )ಸಂಸ್ಥೆಯ ವತಿಯಿಂದ ಮೈಸೂರಿನ ಸಾಹಸಸಿಂಹ ಸಭಾಂಗಣ ಡಾ.ವಿಷ್ಣು ವರ್ಧನ್ ಸ್ಮಾರಕ ಭವನದಲ್ಲಿ ಇತ್ತೀಚಿಗೆ ಆಯೋಜಿಸಲಾಗಿದ್ದ ವಿವಿಧ ಸಾಧಕರುಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಲಾವಣ್ಯ […]
ಅನಿತಾ ಭಾಸ್ಕರ್ ಅವರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರನ್ನು 2023ನೇ ಸಾಲಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”ಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಪ್ರಶಸ್ತಿಯನ್ನು (Award) ಸನ್ಮಾನ್ಯ ಮುಖ್ಯ ಮಂತ್ರಿಗಳು ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್ ನಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಅನಿತಾ ಭಾಸ್ಕರ್ ಅವರು ಪ್ರವಾಸೋದ್ಯಮ ಕೇಂದ್ರ ಕಚೇರಿಯಲ್ಲಿ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ “ಸ್ವದೇಶ್ ದರ್ಶನ, ಪ್ರಸಾದ್ ಹಾಗೂ “ಸ್ವದೇಶ್ ದರ್ಶನ 2.0 ಯೋಜನೆಗಳು ಕರ್ನಾಟಕಕ್ಕೆ ದೊರಕುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ […]