RSS ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ? – ಬೆದರಿಕೆಗೆ ನಾನೂ ಹೆದರಲ್ಲ, ಖರ್ಗೆಯವರೂ ಹೆದರಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ತಮಿಳುನಾಡಿನಲ್ಲಿ ಆರ್.ಎಸ್.ಎಸ್. […]

ನಗು ನಿಲ್ಲಿಸಿದ ರಾಜು ತಾಳಿಕೋಟೆ – ಹೃದಯಾಘಾತದಿಂದ ಜನಪ್ರಿಯ ಹಾಸ್ಯನಟನ ಬಾಳ ಅಂತ್ಯ..!

ಉಡುಪಿ : ಕನ್ನಡ ರಂಗಭೂಮಿ ಹಾಗೂ ಚಿತ್ರರಂಗದ ಪ್ರಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ(58) ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೈನ್‌ ಶೆಟ್ಟಿ ನಟನೆಯ ಚಿತ್ರವೊಂದರ ಚಿತ್ರೀಕರಣಕ್ಕಾಗಿ ಉಡುಪಿಗೆ ಆಗಮಿಸಿದ್ದರು. ನಿನ್ನೆ ಚಿತ್ರೀಕರಣ ಮುಗಿಸಿ ವಿಶ್ರಾಂತಿಯಲ್ಲಿದ್ದಾಗ ಹೃದಯಾಘಾತವಾಗಿದೆ. ತಕ್ಷಣ ಉಡುಪಿಯ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಈ ಹಿಂದೊಮ್ಮೆ ಹೃದಯಾಘಾತಕ್ಕೊಳಗಾಗಿದ್ದ ಅವರಿಗೆ ಸ್ಟಂಟ್‌ ಅಳವಡಿಸಲಾಗಿತ್ತು ಎಂದು ತಿಳಿದುಬಂದಿದೆ. ವಿಜಯಪುರ ಜಿಲ್ಲೆಯ ಅವರ ಹುಟ್ಟೂರಿಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ರಾಜು ತಾಳಿಕೋಟೆ ಅವರ ಬಗ್ಗೆ ಒಂದಷ್ಟು ಮಾಹಿತಿ. […]

26 ವರ್ಷದ ಪ್ರೇಯಸಿಯನ್ನು ಬೆಂಕಿ ಹಚ್ಚಿ ಕೊಂದ 52 ವರ್ಷದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು..!

ಬೆಂಗಳೂರು : ತನ್ನಿಂದ ದೂರವಾಗಲು ಮುಂದಾದ 26 ವರ್ಷದ ಪ್ರೇಯಸಿಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಿರರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 52 ವರ್ಷದ ವಿಠ್ಠಲ ಎಂಬಾತನೇ ಪ್ರೇಯಸಿಯನ್ನು ಹತ್ಯೆಗೈದ ವ್ಯಕ್ತಿ. ಇಬ್ಬರು ಕೂಡಾ ಆನೇಕಲ್‌ ಮಳೆನಲ್ಲಸಂದ್ರ ನಿವಾಸಿಗಳಾಗಿದ್ದು, ವನಜಾಕ್ಷಿ ವಿಧವೆಯಾಗಿದ್ದು, ವಿಠ್ಠಲನ ಪತ್ನಿಯೂ ತೀರಿಕೊಂಡಿದ್ದಳು. ಇಬ್ಬರು ಪರಿಚಯವಾಗಿ ಪರಸ್ಪರ ಪ್ರೀತಿಸುತ್ತಿದ್ದರು. ನಾಲ್ಕು ವರ್ಷದಿಂದ ಇಬ್ಬರು ಸಹಜೀವನ ನಡೆಸುತ್ತಿದ್ದರು ಅಂತ ಹೇಳಲಾಗಿದೆ. ಹೀಗಿರುವಾಗ ವನಜಾಕ್ಷಿ ಬೇರೊಬ್ಬನ ಜೊತೆ ಸ್ನೇಹ ಬೆಳೆಸಿ ಈತನಿಂದ ದೂರವಾಗಲು ಮುಂದಾಗಿದ್ದಾಳೆ. ಈ ವಿಷಯವಾಗಿ ಇಬ್ಬರ […]

ಯಲಹಂಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೆರವಾದ ಮಾಹೆ ಬೆಂಗಳೂರು

Bangalore

ಬೆಂಗಳೂರು: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಬೆಂಗಳೂರು (Bangalore) ಕ್ಯಾಂಪಸ್, ಯಲಹಂಕದಲ್ಲಿನ ವಿವಿಧ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೆರವಾಗಿದ್ದು, ಅವುಗಳ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಿಂದ ನೆರವೇರಿತು. ಆವಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಬಹುಪಯೋಗಿ ಸಭಾಂಗಣವನ್ನು ಯಲಹಂಕ ಶಾಸಕ ಶ್ರೀ ಎಸ್.ಆರ್. ವಿಶ್ವನಾಥ್ ಅವರು ಮತ್ತು ಮಾಹೆ ಬೆಂಗಳೂರಿನ ಹೆಚ್ಚುವರಿ ರಿಜಿಸ್ಟ್ರಾರ್ ಶ್ರೀ ರಾಘವೇಂದ್ರ ಪ್ರಭು ಪಿ. ಉದ್ಘಾಟಿಸಿದರು. ಯಲಹಂಕದ ಸರ್ಕಾರಿ ಶಾಲೆಗಳಿಗೆ ಶೈಕ್ಷಣಿಕ ಮೂಲಸೌಕರ್ಯ ಸುಧಾರಿಸುವುದು ಮತ್ತು ಸಮುದಾಯ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ […]

ಬೆಂಗಳೂರಿನಲ್ಲಿ ಕೊಡಗಿನ ಯುವಕ ಆತ್ಮಹತ್ಯೆ

A young man from Kodagu committed suicide in Bengaluru.

ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಾಲೋನಿ ನಿವಾಸಿ ಸುರೇಶ್ ಹಾಗೂ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಸದಸ್ಯೆ ಚಂದ್ರಾವತಿರವರ ಪುತ್ರ ಗಗನ್ (21) ಎಂಬುವವರು ನೆನ್ನೆ ರಾತ್ರಿ ಬೆಂಗಳೂರಿನಲ್ಲಿ(Bangalore) ತಾನು ವಾಸವಿದ್ದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ (Sucide)ಮಾಡಿಕೊಂಡಿದ್ದಾರೆ. ತಾಯಿಯ ಮುಖ ನೋಡುವ ಮೊದಲೇ ಇಹಲೋಕ ತ್ಯಜಿಸಿದ ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಗಗನ್ ರೀಲ್ಸ್ ಕೂಡ ಮಾಡುತ್ತಿದ್ದರು. ಕಳೆದ ಎರಡು ದಿವಸಗಳಿಂದ ತಾಯಿಗೆ ಕರೆ ಮಾಡಿ ನನಗೆ ಹುಷಾರಿಲ್ಲ, ಬನ್ನಿ ಎಂದು ಪದೇ ಪದೇ ಕರೆದಿದ್ದ ಎನ್ನಲಾಗಿದೆ. […]