ಗೋಡಾ ಹೈ – ಮೈದಾನ್ ಹೈ, ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ : ದಸರಾ ವೇದಿಕೆಯಲ್ಲಿ ಸಿಎಂ ಬಹಿರಂಗ ಸವಾಲು..!

ಮೈಸೂರು : ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಿಗೆ ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ […]
ಮೈಸೂರು ದಸರಾಗೆ ವಿಧ್ಯುಕ್ತ ಚಾಲನೆ – ಆರತಿ ಸ್ವೀಕರಿಸಿ ಭಾವುಕರಾದ ಬಾನು ಮುಷ್ತಾಕ್..!

ಮೈಸೂರು : ನಾಡಹಬ್ಬ ಮೈಸೂರು ದಸರಾಗೆ ಚಾಲನೆ ಸಿಕ್ಕಿದೆ. ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ದಸರಾಗೆ ಚಾಲನೆ ನೀಡಿದರು. ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿದ ಬಾನು ಮುಷ್ತಾಕ್ ದೇವಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಮಂಗಳಾರತಿ ಸ್ವೀಕರಿಸಿದರು. ಇದರೊಂದಿಗೆ ದೇವಿಯ ಸೀರೆಯನ್ನೂ ಪಡೆದುಕೊಂಡರು. ಅರ್ಚಕರು ಹೂವಿನ ಹಾರ ನೀಡಿ ಗೌರವಿಸಿದರು. ಕೆಲ ಕ್ಷಣ ಅವರು ಭಾವುಕರಾದಂತೆ ಕಂಡುಬಂದರು. ಬಾನು ಮುಷ್ತಾಕ್ ದಸರಾ ಉದ್ಘಾಟಿಸುವದಕ್ಕೆ ಪ್ರತಾಪ್ ಸಿಂಹ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ದೇವಿಜೆ ಪೂಜೆ ಮಾಡುತ್ತಾರಾ? […]
ನಾಡಹಬ್ಬ ಮೈಸೂರು ದಸರಾ 2025 – ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಸುಪ್ರೀಂ ಅಸ್ತು..!

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ 2025 ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್ ಉದ್ಘಾಟಿಸುವುದಕ್ಕೆ ತಡೆ ನೀಡಬೇಕೆಂದು ಸಲ್ಲಿಕೆಯಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಅದನ್ನು ವಜಾಗೊಳಿಸಿದ ಕೋರ್ಟ್ ದಸರಾ ಉದ್ಘಾಟಿಸಲು ಬಾನು ಮುಷ್ತಾಕ್ ಅವರಿಗೆ ಅನುಮತಿ ನೀಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾ.ಸಂದೀಪ್ ಮೆಹ್ತಾ ಅವರಿದ್ದ ಪೀಠ ಕರ್ನಾಟಕ ಹೈಕೋರ್ಟ್ ಆದೇಶವನ್ನು […]
ಮೈಸೂರು ದಸರಾ ಉದ್ಘಾಟನೆ ವಿವಾದ : ಬಾನು ಮುಷ್ತಾಕ್ ಮುಸ್ಲಿಂ ಅನ್ನುವ ಕಾರಣಕ್ಕೆ ವಿರೋಧಿಸುತ್ತಿಲ್ಲ – ಮಾಜಿ ಸಂಸದ ಪ್ರತಾಪ್ ಸಿಂಹ

ಮೈಸೂರು : ಬಾನು ಮುಷ್ತಾಕ್ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ದಸರಾ ಉದ್ಘಾಟನೆಗೆ ವಿರೋಧ ಪಡಿಸುತ್ತಿಲ್ಲ. ಹಿಂದುಗಳ ಅರಿಶಿಣ ಕುಂಕುಮದ ಕುರಿತಾಗಿನ ಅವರ ನಿಲುವಿನ ಬಗ್ಗೆ ನಮ್ಮ ಆಕ್ಷೇಪ ಇರುವುದು ಅಂತ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಾನು ಮುಷ್ತಾಕ್ ಬುಕರ್ ಪ್ರಶಸ್ತಿ ಗೆದ್ದಾಗ ನಾವೆಲ್ಲ ಅವರನ್ನು ಅಭಿನಂದಿಸಿದ್ದೇವೆ. ಆದರೆ ದಸರಾ ಉದ್ಘಾಟನೆಗೆ ಅವರನ್ನು ಆಯ್ಕೆ ಮಾಡಿದ ಸಂದರ್ಭದಲ್ಲಿ ನಮ್ಮ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದು, ವಿರೋಧವನ್ನೂ ವ್ಯಕ್ತಪಡಿಸಿದ್ದೇವೆ. ಅವರಿಗೆ ಹಿಂದುಗಳ ಆಚರಣೆ, […]
ಬಾನು ಮುಷ್ತಾಕ್ ದಸರಾ ಉದ್ಘಾಟಿಸದಂತೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರತಾಪ್ ಸಿಂಹ..!

ಮೈಸೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ವಿಚಾರವಾಗಿ ನಡೆಯುತ್ತಿರುವ ಪರ-ವಿರೋಧ ವಿಚಾರ ಈಗ ನ್ಯಾಯಾಲಯ ಮೆಟ್ಟಿಲೇರಿದೆ. ಬುಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುತ್ತಾರೆಂದು ಸರ್ಕಾರ ಹೇಳಿದಾಗಿನಿಂದ ಮಾಜಿ ಸಂಸದ ಪ್ರತಾಪ್ ಸಿಂಹ ತಮ್ಮ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದರು. ಇದೀಗ ಅವರಿಂದ ದಸರಾ ಉದ್ಘಾಟನೆಗೆ ತಡೆ ನೀಡಬೇಕೆಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕೆಲವು ದಿನದ ಹಿಂದೆ ಸರ್ಕಾರ ಹಾಸನದ ಬಾನು ಮುಷ್ತಾಕ್ ಮನೆಗೆ ತೆರಳಿ ಅಧಿಕೃತ ಆಹ್ವಾನ ನೀಡಿತ್ತು. […]
ದಸರಾ ಉದ್ಘಾಟಕರು ಕುಂಕುಮ ಹಚ್ಚಲಿ, ಹಿಂದುವಾಗಲಿ ಎನ್ನುವುದು ತರವಲ್ಲ – ಸಿಎಂ ಸಿದ್ದರಾಮಯ್ಯ

ಮೈಸೂರು : ಸಾಹಿತಿ ಬಾನು ಅವರು ಕುಂಕುಮ ಹಚ್ಚಿಕೊಂಡು ದಸರಾ ಉದ್ಘಾಟಸಲಿ ಎಂದು ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಂ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡ ಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ, ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದರು. ಮುಸ್ಲಿಂ ಗುರುಗಳು ನಾನು ಮುಷ್ತಾಕ್ ಅವರ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ […]
ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದಕ್ಕೆ ನಮ್ಮ ತಕರಾರಿಲ್ಲ – ಸಂಸದ ಯದುವೀರ್

ಮೈಸೂರು : ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡುವುದಕ್ಕೆ ಬಿಜೆಪಿಯ ಕೆಲವು ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಕೊಡಗು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸರ್ಕಾರದ ನಿಲುವನ್ನು ಸ್ವಾಗತಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಸಂಸದ ಯದುವೀರ್, ಬಾನು ಮುಸ್ತಾಕ್ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಅವರ ಆಯ್ಕೆಯಲ್ಲಿ ನನಗೆ ಯಾವುದೇ ಅಭಿಪ್ರಾಯ ಇಲ್ಲ. ತಾಯಿ ಚಾಮುಂಡೇಶ್ವರಿಗೆ ಗೌರವ ಕೊಟ್ಟರೆ ನಮ್ಮದೇನು ತಕರಾರು ಇಲ್ಲ ಎಂದಿದ್ದಾರೆ. […]
ಹಾಸನದಿಂದ ಬೂಕರ್‌ವರೆಗೆ ಬಾನು ಮುಷ್ತಾಕ್ ಪಯಣ – Coorg Buzzನಲ್ಲಿ ಪ್ರಸಾರವಾಗಲಿದೆ ಸಾಧಕಿಯ ಸಂದರ್ಶನ..!

ಮಡಿಕೇರಿ : ಸಾಹಿತ್ಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅತ್ಯುನ್ನತ ʼಬೂಕರ್ ಪ್ರಶಸ್ತಿʼ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು Coorg Buzz ಸಂದರ್ಶಿಸಿದೆ. ಹಾಸನದಲ್ಲಿರುವ ಅವರ ಮನೆಗೆ ಭೇಟಿ ನೀಡಿದ ಕೂರ್ಗ್ ಬಜ್ಹ್ ತಂಡ ಅವರನ್ನು ಅಭಿನಂದಿಸಿತು. ಬಳಿಕ ಬಾನು ಮುಷ್ತಾಕ್ ಅವರು ನಮ್ಮ ವಾರದ ವಿಶೇಷ ಪಾಡ್‌ಕಾಸ್ಟ್ ʼin & out’ಗಾಗಿ ವಿಶೇಷ ಸಂದರ್ಶನ ನೀಡಿದರು. ನಿರಂತರ ಪ್ರವಾಸ, ಪ್ರತಿನಿತ್ಯ ಹಲವಾರು ಕಾರ್ಯಕ್ರಮ, ಬಿಡುವಿಲ್ಲದ ವೇಳಾಪಟ್ಟಿಯ ನಡುವೆ ಒಂದು ಗಂಟೆ ಕಾಲ ನಮ್ಮ ಮಾತುಕೆಯಲ್ಲಿ ಭಾಗಿಯಾದರು. […]
ಬಾನು ಮುಷ್ತಾಕ್ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ – ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿ.ಎಂ – ಇಬ್ಬರಿಗೂ ತಲಾ 10 ಲಕ್ಷ ಪುರಸ್ಕಾರ ಘೋಷಿಸಿದ ಮುಖ್ಯಮಂತ್ರಿ

ಬೆಂಗಳೂರು : ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್(buker) ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು. ಬಾನು ಮುಷ್ತಾಕ್(banu mushtaq) ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ […]