Bengaluru Airport: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದೇಶದ ಅತಿದೊಡ್ಡ ಕಾರ್ಗೋ ಟರ್ಮಿನಲ್‌ ಪ್ರಾರಂಭ

Kempegowda International Airport

ಬೆಂಗಳೂರು:  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಆವರಣದಲ್ಲಿ ವಿನ್ಯಾಸ ಸಾಮರ್ಥ್ಯದಲ್ಲಿ ಭಾರತದಲ್ಲೇ ಅತಿದೊಡ್ಡ ಗ್ರೀನ್‌ಫೀಲ್ಡ್ ದೇಶೀಯ ಕಾರ್ಗೋ ಟರ್ಮಿನಲ್‌ (ಡಿಸಿಟಿ) ಪ್ರಾರಂಭವಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಮತ್ತು ವಾಯುಯಾನ ಸರಕು ಸಾಗಣೆ ಕ್ಷೇತ್ರದ ಮೆನ್ಜೀಸ್ ಏವಿಯೇಷನ್ ಸಂಸ್ಥೆಗಳ ಸಹಯೋಗದಲ್ಲಿ ನಿರ್ಮಾಣವಾದ 245,000 ಚದರ ಅಡಿ ವ್ಯಾಪ್ತಿಯ ಈ ಕಾರ್ಗೋ ಟರ್ಮಿನಲ್‌ನ್ನು, ದೇಶೀಯವಾಗಿ ಹೆಚ್ಚುತ್ತಿರುವ ವಾಯುಮಾರ್ಗ ಸರಕು ಸಾಗಣೆಯ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಅತ್ಯಾಧುನಿಕ ಮೂಲಸೌಕರ್ಯದೊಂದಿಗೆ ವಿಶಾಲವಾಗಿ ವಿನ್ಯಾಸಗೊಳಿಸಲಾಗಿದೆ. ಕೈಗಾರಿಕೆಗಳ ಸಂಪರ್ಕ […]