ಕಾವೇರಿ ವಿವಾದ: ಆಗಸ್ಟ್ 3ರ ಬೆಂಗಳೂರಿನಲ್ಲಿ ನಡೆಯುವ ಸಭೆಗೆ ತಮಿಳುನಾಡು ಸಿಎಂ ವಿಜಯ್ ಬರ್ತಾರಾ?

ಬೆಂಗಳೂರು: ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಆಗಸ್ಟ್ 3 ರಂದು ರಾಜಧಾನಿ ಬೆಂಗಳೂರಿನಲ್ಲಿ ಪ್ರಮುಖ ಸಭೆಯೊಂದನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಆಹ್ವಾನ ನೀಡಲಾಗಿದ್ದು, ಸಭೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದರೆ, ಪ್ರಸ್ತುತ ಇರುವ ರಾಜಕೀಯ ಮತ್ತು ಭದ್ರತಾ ಸನ್ನಿವೇಶಗಳ ಹಿನ್ನೆಲೆಯಲ್ಲಿ ಸಿಎಂ ವಿಜಯ್ ನೇರವಾಗಿ ಆಗಮಿಸುವ ಬದಲು ವರ್ಚುವಲ್ (ಆನ್‌ಲೈನ್) ಮೂಲಕ ಭಾಗವಹಿಸುವ ಸಾಧ್ಯತೆಯೇ ಹೆಚ್ಚಾಗಿದೆ. ಕಾವೇರಿ ನೀರು […]