ನ.24 ರಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಸಂಪ್ರೋಕ್ಷಣೆ

ಭಾಗಮಂಡಲ : ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ ಸಂಪ್ರೋಕ್ಷಣೆಯನ್ನು ನಡೆಸಿಕೊಂಡು ಬರುತ್ತಿರುವ ಹಿನ್ನಲೆಯಲ್ಲಿ ಈ ವರ್ಷವೂ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನವೆಂಬರ್ 24 ರಿಂದ 27 ರವರೆಗೆ “ಸಂಪ್ರೋಕ್ಷಣೆ” ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ ಚಂದ್ರಶೇಖರ್ ಕೋರಿದ್ದಾರೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ನವೆಂಬರ್ 24 ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ, […]

ಕಾವೇರಿ ತೀರ್ಥೋದ್ಭವ – ಸ್ವಾಗತ ಕೋರಿ ಹಾಕಲಾಗಿದ್ದ ಬ್ಯಾನರ್‌ ಹರಿದು ವಿಕೃತಿ – ಕ್ರಮಕ್ಕೆ ಆಗ್ರಹ

ಭಾಗಮಂಡಲ : ನಾಡಿನ ಜೀವನದಿ ಕಾವೇರಿಯ ತವರು ತಲಕಾವೇರಿಯಲ್ಲಿ ತುಲಾ ಸಂಕ್ರಮಣ ಜಾತ್ರೋತ್ಸವ ಅ.17ರಂದು ನಡೆಯಲಿದೆ. ಈ ಸಂಬಂಧ ಭಕ್ತಾದಿಗಳಿಗೆ ಸ್ವಾಗತ ಕೋರಿ ಕಾರುಗುಂದದಲ್ಲಿ ಅಳವಡಿಸಲಾಗಿದ್ದ ಬ್ಯಾನರ್‌ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಗೌಡ ಸಮಾಜಗಳ ಒಕ್ಕೂಟ ವತಿಯಿಂದ ವಿವಿಧೆಯಲ್ಲಿ ಸ್ವಾಗತದ ಬ್ಯಾನರ್‌ ಅಳವಡಿಸಲಾಗಿತ್ತು. ಕಾರುಗುಂದ ವ್ಯಾಪ್ತಿಯಲ್ಲಿ ರಸ್ತೆ ಬದಿ ಅಳವಡಿಸಲಾಗಿದ್ದ ಬ್ಯಾನರ್‌ ಅನ್ನು ಹರಿದು ಹಾಕಲಾಗಿದೆ. ಈ ಕೃತ್ಯವನ್ನು ವಿವಿಧ ಗೌಡ ಸಮಾಜಗಳು ಖಂಡಿಸಿದ್ದು, ಕೃತ್ಯವೆಸಗಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪೊಲೀಸ್‌ ಇಲಾಖೆ […]

ಭಾಗಮಂಡಲ ಸರ್ಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳ ಪುನರ್ಮಿಲನ – ಗುರುಗಳಿಗೆ ಸನ್ಮಾನಿಸಿ ಗೌರವಾರ್ಪಣೆ

ಭಾಗಮಂಡಲ(Bhagamandala) : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2007ನೇ ಸಾಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪುನರ್ಮಿಲನ ಕಾರ್ಯಕ್ರಮ ನಡೆಯಿತು. ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳೆಲ್ಲ ಸೇರಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ವಿದ್ಯಾರ್ಥಿಗಳು ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಂಡರು. ಶಾಲೆಯ ಅಭಿವೃದ್ಧಿಗೆ ತಾವು ಸಹಕರಿಸುತ್ತೇವೆ ಎಂಬ ಭರವಸೆ ನೀಡಿದರು. 2007ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಶಾಲೆಗೆ ಪ್ರೊಜೆಕ್ಟರ್ ಹಾಗೂ ತಟ್ಟೆಗಳನ್ನು ಕೊಡುಗೆಯಾಗಿ ನೀಡಲಾಯಿತು. ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ಎಸ್‌.ಡಿ.ಎಂ.ಸಿ. ಅಧ್ಯಕ್ಷರು ಸೇರಿದಂತೆ ಅನೇಕರು […]

ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಗಣೇಶ ಚತುರ್ಥಿ ಪೂಜಾ ಕಾರ್ಯಕ್ರಮ ಆ.27ಕ್ಕೆ

ಭಾಗಮಂಡಲ : ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದ ರೂಢಿ ಸಂಪ್ರದಾಯದಂತೆ ಪ್ರತೀ ವರ್ಷ ಗಣೇಶ ಚತುರ್ಥಿ ಪೂಜಾ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವೂ ಆಗಸ್ಟ್ ೨೭ ರಂದು ಗಣೇಶ ಚತುರ್ಥಿ ಪೂಜಾ ಕಾರ್ಯಕ್ರಮ ನಡೆಯಲಿದೆ. ಭಕ್ತಾದಿಗಳು ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ ಕೋರಿದ್ದಾರೆ. ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ೨೭ ರಂದು ಬೆಳಗ್ಗೆ ೯.೩೦ […]

ಮಡಿಕೇರಿ ಭಾಗಮಂಡಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

A. S. Ponnanna

ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ, ತೀರ್ಥಕ್ಷೇತ್ರ ತಲಕಾವೇರಿ-ಭಾಗಮಂಡಲ (Bhagamandala) ಸಂಪರ್ಕಿಸುವ ಮಡಿಕೇರಿ (Madikeri) ಭಾಗಮಂಡಲ ಮುಖ್ಯರಸ್ತೆಯ ಅಪ್ಪಂಗಳ-ಬೆಟ್ಟಗೇರಿ ಭಾಗದಲ್ಲಿ ರಸ್ತೆ ಹದಗೆಟ್ಟಿರುವುದನ್ನು ಮನಗಂಡ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್ ಪೊನ್ನಣ್ಣ (A. S. Ponnanna) ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ತಂದು, ಸುಮಾರು ₹4 ಕೋಟಿ ವೆಚ್ಚದಲ್ಲಿ ಅಪ್ಪಂಗಳ ಜಂಕ್ಷನ್ ನಿಂದ ಬೆಟ್ಟಗೇರಿ ತನಕದ ರಸ್ತೆಯ ಪುನರ್ ನಿರ್ಮಾಣ ಕಾರ್ಯಕ್ಕೆ ಇಂದು ಭೂಮಿ ಪೂಜೆ ನೆರವೇರಿಸಿದರು. ದಿನವೊಂದಕ್ಕೆ ಸಾವಿರಾರು ಭಕ್ತಾದಿಗಳು ಹಾಗೂ […]