ನಕ್ಸಲ್ ನಿಗ್ರಹ ಪಡೆ ವತಿಯಿಂದ ಬುಡಕಟ್ಟು ಜನಾಂಗದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿರಾಜಪೇಟೆ: ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದಲ್ಲಿನ ವಾಲ್ಮೀಕಿ ಭವನದಲ್ಲಿ ನಕ್ಸಲ್ ನಿಗ್ರಹ ಪಡೆ ವತಿಯಿಂದ ಅತ್ಯಂತ ವ್ಯವಸ್ಥಿತವಾದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿತ್ತು. ನಕ್ಸಲ್ ಪೀಡಿತ ಪ್ರದೇಶಗಳ ಬುಡಕಟ್ಟು ಜನಾಂಗದವರ ಆರೋಗ್ಯ ಹಿತದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವು ಜನರ ಅಭೂತಪೂರ್ವ ಸ್ಪಂದನೆಯೊAದಿಗೆ ಯಶಸ್ವಿಯಾಯಿತು. ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಅವರ ಸೂಕ್ತ ಮಾರ್ಗದರ್ಶನದಂತೆ, ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕು.ಬಿಂದು ಮಣಿ ಆರ್.ಎನ್, ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, […]
ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ

ಸಮಾಜ ಸ್ವಸ್ಥವಾಗಿಡಲು ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಲಹೆ ಮಾಡಿದ್ದಾರೆ. ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಡಗು ಘಟಕ ವತಿಯಿಂದ ನಗರದ ರೆಡ್‍ಬ್ರಿಕ್ಸ್ ಇನ್ ಸತ್ಕಾರ ಸಭಾಂಗಣದಲ್ಲಿ ಸೋಮವಾರ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಅರಿವು ಕಾರ್ಯಕ್ರಮ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಹೆಚ್ಚಿನ ಪಾತ್ರ ವಹಿಸುತ್ತಾರೆ. ಆದ್ದರಿಂದ ಒಂದು ಕುಟುಂಬ […]
ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ

ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗದಾಮಪ್ಪ ಅವರು ಹೇಳಿದರು. ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕೊಡಗು ಇವರ ಸಹಯೋಗದಲ್ಲಿ ಶುಕ್ರವಾರ 2025-26 ನೇ ಸಾಲಿನ ಉಚಿತ ಬೇಸಿಗೆ ಶಿಬರ (Summer camp) ಉದ್ಘಾಟಿಸಿ […]
ಮೇ 16 ರಿಂದ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ

ಮಡಿಕೇರಿ:- ಪ್ರಸಕ್ತ (2025-26) ಸಾಲಿನಲ್ಲಿ ಜಿಲ್ಲಾ ಮಟ್ಟದ ಉಚಿತ ಬೇಸಿಗೆ ಶಿಬಿರವು ಕೊಡಗು ಜಿಲ್ಲಾ ಬಾಲಭವನ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಮೇ, 16 ರಿಂದ 30 ರವರೆಗೆ “ಯುವಜನ ಕ್ರೀಡಾ ಸಬಲೀಕರಣ ಇಲಾಖಾ ವ್ಯಾಪ್ತಿಯ ಯೋಗ ತರಭೇತಿಯ ಸಭಾಂಗಣ”ದಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ 05 ರಿಂದ 16 ವರ್ಷದ ಮಕ್ಕಳು ಭಾಗವಹಿಸಿ ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು […]
ಮೇ.12 ರಿಂದ 21ರವರೆಗೆ ಮಕ್ಕಳ ಉಚಿತ “ಚಿನ್ತನೆ – ಚಲನೆ” ಶಿಬಿರ

ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ವತಿಯಿಂದ ಮೇ 12 ರಿಂದ 21ರವರೆಗೆ ಮೂರ್ನಾಡಿನಲ್ಲಿ ಮಕ್ಕಳ ಉಚಿತ “ಚಿನ್ತನೆ – ಚಲನೆ” ಶಿಬಿರ (Camp) ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷ ಈರಮಂಡ ಹರಿಣಿ ವಿಜಯ್ ತಿಳಿಸಿದರು. ಮೂರ್ನಾಡು ಪಂಚಾಯಿತಿ ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ 10 ದಿನಗಳ ಕಾಲ ನಡೆಯುವ ಶಿಬಿರದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು. ಪ್ರತಿದಿನ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ […]
ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಸುವರ್ಣವಾಕಾಶ: ವಿಶೇಷ ಶಿಬಿರ

ಕ್ರೀಡೆಯಲ್ಲಿ (sports) ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಕ್ರೀಡಾ ವಸತಿ ಮತ್ತು ನಿಲಯಗಳಲ್ಲಿ ಪ್ರವೇಶಾವಕಾಶ ನೀಡುವ ಸಲುವಾಗಿ ಆಯ್ಕೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಾದ್ಯಂತ ಒಟ್ಟು 2 ಕ್ರೀಡಾ ವಸತಿ ಶಾಲೆ ಹಾಗೂ 32 ಕ್ರೀಡಾ ವಸತಿ ನಿಲಯಗಳನ್ನು ಹೊಂದಿದೆ. ಈ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ 5ನೇತರಗತಿ, 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಹಂತದ ಕ್ರೀಡಾಪಟುಗಳಿಗೆ ಪ್ರವೇಶಾವಕಾಶ ನೀಡಲಾಗುತ್ತಿದ್ದು ಕ್ರೀಡಾಪಟುಗಳಿಗೆ ಉಚಿತ ಊಟೋಪಹಾರ, ವಸತಿ, ವೈಜ್ಞಾನಿಕ ಕ್ರೀಡಾ ತರಬೇತಿ, ಕ್ರೀಡಾ ಸಲಕರಣೆಗಳು, […]
ಪ್ರತಿಭಾನ್ವಿತ ಕ್ರೀಡಾಪಟುಗಳ ವಿಶೇಷ ಆಯ್ಕೆ ಶಿಬಿರ

ಪ್ರಸಕ್ತ(2025-26) ಸಾಲಿಗೆ ಕ್ರೀಡಾ ಶಾಲೆ/ ವಸತಿ ನಿಲಯಗಳಿಗೆ 8 ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿಗೆ ಈಗಾಗಲೇ ಆಯ್ಕೆ ಪ್ರಕ್ರಿಯೆ ಮಾಡಲಾಗಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸದೆ ಅವಕಾಶ ವಂಚಿತರಾದ ಪ್ರತಿಭಾನ್ವಿತ ಕ್ರೀಡಾಪಟುಗಳ (athletes) ಆಯ್ಕೆಯನ್ನು ಏಪ್ರಿಲ್, 15 ರಂದು ಹಾಕಿ ಮೈಸೂರು ಚಾಮುಂಡಿ ವಿಹಾರ ಕ್ರೀಡಾಂಗಣ, ಜಿಮ್ನಾಸ್ಟಿಕ್ಸ್ ತುಮುಕೂರು ಜಿಲ್ಲಾ ಕ್ರೀಡಾಂಗಣದಲ್ಲಿ, ಫುಟ್ಬಾಲ್ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಏಪ್ರಿಲ್, 17 ರಂದು ಅಥ್ಲೆಟಿಕ್ಸ್, ಬಾಸ್ಕೇಟ್ ಬಾಲ್, ವಾಲಿಬಾಲ್ ಮತ್ತು ಕಬಡ್ಡಿ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ […]