ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ

ಒಂದು ದಿನಕ್ಕೆ ಸೀಮಿತವಾಗಿರದೆ ಪ್ರತಿನಿತ್ಯ ಯೋಗ ಮಾಡುವುದರಿಂದ ನಮ್ಮ ದೇಹ ಹಾಗೂ ಮನಸ್ಸಿನ ಸ್ವಾಸ್ಥ್ಯವನ್ನು ಕಾಪಾಡಬಹುದು ಎಂದು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶುಶ್ರೂಷಕ ಅಧಿಕಾರಿ, ಸರ್ಕಾರಿ ನೌಕರರ ಸಂಘದ ರಾಷ್ಟ್ರೀಯ ಮಟ್ಟದ ಯೋಗಪಟು ಎ.ಬಿ.ಲಲಿತ ಅಭಿಪ್ರಾಯ ಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು ದೈಹಿಕ ಮತ್ತು ಮಾನಸಿಕ ಸದೃಢತೆಯ ಹಿನ್ನಲೆಯಲ್ಲಿ ಯೋಗವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಯನ್ನು ಪಡೆದಿದೆ. ನರೇಂದ್ರ ಮೋದಿಯವರು ಪ್ರಧಾನಿಗಳಾದ ನಂತರ ಯೋಗಕ್ಕೆ […]
2nd PUC ಪರೀಕ್ಷೆಯಲ್ಲಿ ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ದ್ವಿತೀಯ ಪಿ. ಯು. ಫಲಿತಾಂಶ ಪ್ರಕಟಗೊಂಡಿದ್ದು ವಿರಾಜಪೇಟೆ ಕಾವೇರಿ ಪಿ. ಯು. ಕಾಲೇಜಿನ ವಿದ್ಯಾರ್ಥಿಗಳು ಶೇಕಡ 88 ರಷ್ಟು ಫಲಿತಾಂಶವನ್ನು ನೀಡಿ ಸಾಧನೆಯನ್ನು ತೋರಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡ 100 ರಷ್ಟು ಫಲಿತಾಂಶ ಪಡೆದಿದ್ದು 9 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡ 90ರಷ್ಟು ಫಲಿತಾಂಶ ಪಡೆದಿದ್ದು ಅದರಲ್ಲಿ ಎಂ.ಎಸ್ ಫರೀದ 588 , ಬಿ.ಎಸ್.ಚೈತ್ರ547 , ಎಂ.ಎಸ್.ಮಾನ್ವಿ 541 ಅಂಕಗಳನ್ನು ಪಡೆದು ಉನ್ನತ ಶ್ರೇಣಿ ಪಡೆದರೆ […]
ಕಾವೇರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಂವಾದ ಕಾರ್ಯಕ್ರಮ

ಪ್ರಯತ್ನ ಮತ್ತು ಪರಿಶ್ರಮದಿಂದ ಗುರಿಯನ್ನು ಮುಟ್ಟಬಹುದೇ ಹೊರತು ಅದೃಷ್ಟ, ಹಣೆಬರಹ ನಂಬಿದರೆ ಯಶಸ್ಸನ್ನು ಪಡೆಯಲು ಸಾಧ್ಯವಿಲ್ಲ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ರುದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ (Cauvery College) ಐಕ್ಯೂಎಸಿ ಹಾಗೂ ಇತಿಹಾಸ ವಿಭಾಗದ ವತಿಯಿಂದ ಮಂಗಳವಾರ ಕಾಲೇಜಿನ ಕೌಸ್ತುಬ ಸಭಾಭವನದಲ್ಲಿ ಆಯೋಜಿಸಲಾಗಿದ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯಲ್ಲಿ ಸಮಯ ನಿರ್ವಹಣೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇತಿಹಾಸ ವಿಷಯದ ಮಹತ್ವ ಎಂಬ ವಿಷಯದ ಕುರಿತು ನಡೆದ ಸಂವಾದ ಕಾರ್ಯಕ್ರಮವನ್ನು […]
ಕಾವೇರಿ ಕಾಲೇಜಿನಲ್ಲಿ ನಡೆದ ದಿ. ಎಂ ಜಿ ಪದ್ಮನಾಭ ಕಾಮತ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮ

ವಿರಾಜಪೇಟೆ: ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯ, ಭಾಷೆ , ನಾಡು, ಸಂಸ್ಕೃತಿ , ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ದೃಷ್ಟಿಯಿಂದ ಪ್ರಸ್ತುತ ಕಾಲದಲ್ಲಿ ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಕೆ.ಜಿ . ವೀಣಾ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಾವೇರಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ದಿ. ಎಂ ಜಿ ಪದ್ಮನಾಭ ಕಾಮತ್ […]
ಕಾವೇರಿ ಕಾಲೇಜಿನಲ್ಲಿ ‘ವಾಣಿಜ್ಯ ಶಾಸ್ತ್ರದ ಅಡಿಪಾಯ’ ಪುಸ್ತಕ ಬಿಡುಗಡೆ

ಗೋಣಿಕೊಪ್ಪಲು: ಕಾವೇರಿ ಕಾಲೇಜಿನ ಸಹ ಪ್ರಾಧ್ಯಾಪಕಿ ಪುತ್ತಾಮನೆ ಪೂಜಾ ಶರಣು ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ವೇಣುಗೋಪಾಲ್ ಹೆಚ್.ಎಸ್. ಅವರು ಜಂಟಿಯಾಗಿ ರಚಿಸಿರುವ ‘ವಾಣಿಜ್ಯ ಶಾಸ್ತ್ರದ ಅಡಿಪಾಯ’ (ಕನ್ನಡ ಆವೃತ್ತಿ) ಮತ್ತು ‘Foundation of Commerce’ (ಆಂಗ್ಲ ಆವೃತ್ತಿ) ಎಂಬ ಎರಡು ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಮಂಗಳೂರು ಮತ್ತು ಕೊಡಗು ವಿಶ್ವವಿದ್ಯಾಲಯಗಳ ನೂತನ ಪಠ್ಯಕ್ರಮವನ್ನು ಆಧರಿಸಿ ಈ ಪುಸ್ತಕಗಳನ್ನು ಸಿದ್ಧಪಡಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಪೂರಕ ಮಾಹಿತಿಯನ್ನು ಒದಗಿಸುವ ಉದ್ದೇಶ ಹೊಂದಿವೆ. ಕಾರ್ಯಕ್ರಮದಲ್ಲಿ […]
ಶೈಕ್ಷಣಿಕ ಲೋಕದ ಧ್ರುವತಾರೆಗಳು: ಕಾವೇರಿ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳ ಕ್ರೀಡಾಕೂಟ

ಕ್ರೀಡೆ ಕೇವಲ ಆರೋಗ್ಯದ ದೃಷ್ಟಿಯಿಂದ ಮಾತ್ರವಲ್ಲ ನಮ್ಮ ನಡುವೆ ಪರಸ್ಪರ ಉತ್ತಮ ಸಂಬಂಧ ಬೆಳೆಸುವುದರೊಂದಿಗೆ ನಮ್ಮಲ್ಲಿ ಸಾಮರಸ್ಯ ಮೂಡಿಸುತ್ತದೆ ಎಂದು ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪದ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ವತಿಯಿಂದ ಕಾಲೇಜಿನ ಮೈದಾನದಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ ಅಧೀನ ಸಂಸ್ಥೆಗಳ ಸಿಬ್ಬಂದಿ ವರ್ಗದ ನಡುವೆ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳಲು ಕ್ರೀಡೆಯು ಬಹಳ ಸಹಕಾರಿಯಾಗಿದೆ .ಕ್ರೀಡೆಯೂ ನಮ್ಮನ್ನೆಲ್ಲಾ ಒಂದೆಡೆ […]
ಸೆಂಟ್ ಆನ್ಸ್ ಪದವಿ ಕಾಲೇಜಿನ NSS ಘಟಕದ ವಾರ್ಷಿಕ ವಿಶೇಷ ಶಿಬಿರ ಮಾರ್ಚ್ 4 ರಿಂದ ಆರಂಭ

ವಿರಾಜಪೇಟೆ : ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ಮಾರ್ಚ್ 4 ರಿಂದ ಮಾರ್ಚ್ 10 ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ಜರುಗಲಿದೆ. ಮಾರ್ಚ್ 4 ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು ಉದ್ಘಾಟನೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ರವರು ನೆರವೇರಿಸಲಿದ್ದಾರೆ.ಬಿಟ್ಟಂಗಾಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಮೂಕಚಂಡ […]
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ರಾಜ್ಯಮಟ್ಟದ 5 ಎ ಸೈಡ್ ರಿಂಕ್‌ಹಾಕಿ ಪಂದ್ಯಾಟ

ರಾಜಪೇಟೆ ಕಾವೇರಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ವತಿಯಿಂದ ಕೊಡಗಿನ ಇತಿಹಾಸದಲ್ಲಿ ಮೊದಲ ಬಾರಿಗೆ ರಿಂಕ್ 5 ಎ ಸೈಡ್ ರಾಜ್ಯಮಟ್ಟದ ಅಂತರ ಕಾಲೇಜು ಹಾಕಿ ಪಂದ್ಯಾಟವನ್ನು ಆಯೋಜಿಸಲಾಗಿದೆ ಎಂದು ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ಡನ್ ಮಾಹಿತಿ ನೀಡಿದರು . ಕಾವೇರಿ ಕಾಲೇಜಿನ ಕೌಸ್ತುಬ ಸಭಾಭವನದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿಯೆ ಮೊದಲ ಬಾರಿ ಅಂತರ ಕಾಲೇಜು 5 ಎ ಸೈಡ್ ರಿಂಕ್ ಹಾಕಿ ಪಂದ್ಯಾಟವನ್ನು […]
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ

ದೇಶದ ಇತಿಹಾಸವನ್ನು ಮೆಲಕು ಹಾಕಿ ನೋಡುವುದಾದರೆ ಸಮಾಜದ ಏಳಿಗೆಗೆ ಶ್ರಮಿಸಿದವರನ್ನು, ಬಡವರ ಕಷ್ಟಕ್ಕೆ ನೆರವಾದವರನ್ನು, ನೊಂದವರಿಗೆ ನೆರವಾಗಿ ನಿಂತಂತವರನ್ನು ಸದಾ ನೆನಪಿಸಿಕೊಳ್ಳುತ್ತಾ ಬರುತ್ತಿದ್ದಾರೆಯೇ ಹೊರತು ಶ್ರೀಮಂತರನ್ನು ನೆನೆಸಿಕೊಳ್ಳುವುದಿಲ್ಲವೆಂದು ಕಾವೇರಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಆರ್ ಸಲ್ದಾನ ಹೇಳಿದರು . ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಬುಧವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು ಎನ್.ಎಸ್.ಎಸ್ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಕನಸಿನ ಕೂಸಾಗಿ ಆ ಹುಟ್ಟಿತು . ವಿದ್ಯಾರ್ಥಿಗಳನ್ನು ಶಿಕ್ಷಣದ ಹಂತದಲ್ಲಿ ಸಮಾಜ […]
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

ಗ್ರಂಥಾಲಯಗಳು ಜ್ಞಾನಾರ್ಜನೆಯ ಪ್ರಮುಖ ತಾಣವಾಗಿದ್ದು. ಸಮಾಜದ ಪ್ರಗತಿಗೆ ಹಾಗೂ ಪ್ರತಿ ಓದುಗರ ಬೆಳವಣಿಗೆಗೆ ಗ್ರಂಥಾಲಯ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ವಿರಾಜಪೇಟೆ (Virajpet) ಕಾವೇರಿ ಕಾಲೇಜಿನ (Cauvery College) ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಆಚರಿಸಲಾದ ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥನ್ ರವರ 133 ನೇ ಜನ್ಮ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಅವರು ಪ್ರತಿವರ್ಷ ಆಗಸ್ಟ್ 12ರಂದು ಗ್ರಂಥಪಾಲಕರ ದಿನಾಚರಣೆ ಮಾಡುತ್ತಾ ಬಂದಿದ್ದೇವೆ. ಇಂದಿನ ಡಿಜಿಟಲ್ ಯುಗದಲ್ಲಿಯೂ […]