ಬೆಂಗಳೂರಿನಲ್ಲಿ ಕಾಲ್ತುಳಿತ: ಸ್ವಯಂಪ್ರೇರಿತ PIL ದಾಖಲಿಸಿಕೊಂಡ ಹೈಕೋರ್ಟ್

ಆರ್ಸಿಬಿ (RCB) ವಿಜಯೋತ್ಸವ ಕಾರ್ಯಕ್ರಮದ ವೇಳೆ ಬೆಂಗಳೂರಿನ (Bengaluru) ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಈ ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ನೀಡಿ, ಆದೇಶ ಹೊರಡಸಿದೆ. ಈ ಪ್ರಕರಣದ ವಿಚಾರಣಾಧಿಕಾರಿಯಾಗಿ ಜಿಲ್ಲಾಧಿಕಾರಿ ಜಗದೀಶ್.ಜಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಕಾಲ್ತುಳಿತ ದುರಂತದಲ್ಲಿ 11 ಜನರ ಸಾವಿಗೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ […]
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ 11 ಸಾವು: ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಐಪಿಎಲ್ 2025ರ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಬಳಿ ಭೀಕರ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಭೀಕರ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), […]