ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ CIPUC ಬಾಲಕಿಯರ ತಂಡಕ್ಕೆ ರನ್ನರ್ ಅಪ್ ಪ್ರಶಸ್ತಿ

ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು.ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ರನ್ನರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೂ ಜಿಲ್ಲಾಮಟ್ಟಕ್ಕೆ ಮೂವರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಈ ಕಬಡ್ಡಿ ಪಂದ್ಯಾವಳಿಯಲ್ಲಿ ದ್ವಿತೀಯ ಪಿ.ಯು.ವಿದ್ಯಾರ್ಥಿನಿಯರಾದ ಎಂ.ಎಸ್.ನಿಶಿತಾ ನೀಲಮ್ಮ, ಫಾತಿಮಾ ರಿಫ಼ಾನ , ತಾನ್ಯ ಕಾವೇರಮ್ಮ ಮತ್ತು ಪ್ರಥಮ ಪಿ.ಯು.ವಿದ್ಯಾರ್ಥಿಯರಾದ ಕೃತಿಕಾ ಎ.ಬಿ , ಇಫ್ರಾ ರಿಫ಼ಾತ್ , ಮೌಲ್ಯ ಜಿ , ಜೋಶ್ನಾ ಸಿ.ಜೆ , […]