ಕಾವೇರಿ ಕಾಲೇಜಿನಲ್ಲಿ ‘ವಾಣಿಜ್ಯ ಶಾಸ್ತ್ರದ ಅಡಿಪಾಯ’ ಪುಸ್ತಕ ಬಿಡುಗಡೆ

ಗೋಣಿಕೊಪ್ಪಲು: ಕಾವೇರಿ ಕಾಲೇಜಿನ ಸಹ ಪ್ರಾಧ್ಯಾಪಕಿ ಪುತ್ತಾಮನೆ ಪೂಜಾ ಶರಣು ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ವೇಣುಗೋಪಾಲ್ ಹೆಚ್.ಎಸ್. ಅವರು ಜಂಟಿಯಾಗಿ ರಚಿಸಿರುವ ‘ವಾಣಿಜ್ಯ ಶಾಸ್ತ್ರದ ಅಡಿಪಾಯ’ (ಕನ್ನಡ ಆವೃತ್ತಿ) ಮತ್ತು ‘Foundation of Commerce’ (ಆಂಗ್ಲ ಆವೃತ್ತಿ) ಎಂಬ ಎರಡು ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಮಂಗಳೂರು ಮತ್ತು ಕೊಡಗು ವಿಶ್ವವಿದ್ಯಾಲಯಗಳ ನೂತನ ಪಠ್ಯಕ್ರಮವನ್ನು ಆಧರಿಸಿ ಈ ಪುಸ್ತಕಗಳನ್ನು ಸಿದ್ಧಪಡಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಪೂರಕ ಮಾಹಿತಿಯನ್ನು ಒದಗಿಸುವ ಉದ್ದೇಶ ಹೊಂದಿವೆ. ಕಾರ್ಯಕ್ರಮದಲ್ಲಿ […]
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ

ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಚಯಿಸುವುದರೊಂದಿಗೆ ಹೊಸ ವಿಚಾರಗಳನ್ನು ತಿಳಿಸಿ ಕನ್ನಡ ತನವನ್ನು ಬೆಳೆಸುವ ಕಾರ್ಯ ಮಾಡುತ್ತದೆ ಎಂದು ಸ. ಪ್ರ.ದ ಕಾಲೇಜಿನ ಪ್ರಾಂಶುಪಾಲೆ ಪ್ರೊ ಡಿ.ಕೆ. ಸರಸ್ವತಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ದಿ. ಸಾಹಿತಿ ಮುಲ್ಲೇಂಗಡ ಬೇಬಿ ಚೋಂದಮ್ಮ ಹಾಗೂ ಮಂಡೇಪಂಡ ಅಕ್ಕಮ್ಮ ಗಣಪತಿ […]
ಸೆಸ್ಟೊಬಾಲ್ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕರ್ನಾಟಕಕ್ಕೆ ದ್ವಿತೀಯ ಸ್ಥಾನ, ಕೊಡಗಿನ ನಂದಿನಿ ಸಾಧನೆ

ಇತ್ತೀಚೆಗೆ ಉತ್ತರ ಪ್ರದೇಶದ ಬರೇಲಿಯ ಉಡಾನ್ ಗ್ಲೋಬಲ್ ಶಾಲೆಯಲ್ಲಿ ನಡೆದ 7ನೇ ವರ್ಷದ ಸೆಸ್ಟೊಬಾಲ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯ ತಂಡವು ಅಮೋಘ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದ ಪ್ರತಿಭಾನ್ವಿತ ಕ್ರೀಡಾಪಟು ನಂದಿನಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕುಶಾಲನಗರದ ತರಬೇತುದಾರರಾದ ಜಾನ್ಸನ್ ಮತ್ತು ಕಾರ್ತಿಕ್ ಅವರ ಮಾರ್ಗದರ್ಶನದಲ್ಲಿ ಕಠಿಣ ತರಬೇತಿ ಪಡೆದಿದ್ದ ಕರ್ನಾಟಕ ತಂಡವು, ರಾಷ್ಟ್ರಮಟ್ಟದಲ್ಲಿ ಎದುರಾಳಿಗಳನ್ನು ಮಣಿಸಿ […]
ನಿವೃತ್ತ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ರವರಿಗೆ ಬೀಳ್ಕೊಡುಗೆ ಸಮಾರಂಭ

ವಿರಾಜಪೇಟೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿ ಹಾಗೂ ಕಾಲೇಜಿನ ಪ್ರಾಂಶುಪಾಲೆಯಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ರವರನ್ನು ಕಾಲೇಜಿನ ವತಿಯಿಂದ ಬೀಳ್ಕೊಡುಗೆಯನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚಿಲ್ಲವಂಡ ಕಾವೇರಪ್ಪರವರು ಮಾತನಾಡುತ್ತಾ ಪ್ರಾಂಶುಪಾಲರ ಶಿಸ್ತು ಹಾಗೂ ಕರ್ತವ್ಯ ನಿಷ್ಠೆ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿಯನ್ನು ಹಾಕಿದೆ. ಅವರ ಮಾರ್ಗದರ್ಶನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊಂಡಿದ್ದಾರೆ ಎಂದು […]
ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆ

ಮಡಿಕೇರಿ:-ಮರಗೋಡು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದ್ದು, ಮರಗೋಡು ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೂಡಿಗೆ ಸರ್ಕಾರಿ ಕಾಲೇಜಿನ ಮಾನಸ ಪಿ.ಜಿ. ಮತ್ತು ಮಾನಸ ಎ.ಪ್ರಥಮ ಸ್ಥಾನ ಪಡೆದು ರೂ.10 ಸಾವಿರ ನಗದು ಬಹುಮಾನ ಮತ್ತು ಆಕರ್ಷಕ ಪಾರಿತೋಷಕ ಪಡೆದರು. ನೆಲ್ಲಿಹುದಿಕೇರಿ ಕಾಲೇಜಿನ ಸಫಾ ಮತ್ತು ಯುಕ್ತ ದ್ವಿತೀಯ ಸ್ಥಾನ ಮತ್ತು ಚೆನ್ನಮ್ಮ ಮಾದಾಪುರ ಕಾಲೇಜಿನ ಸುಕನ್ಯ ಮತ್ತು ರಕ್ಷಾ […]
FMC ಕಾಲೇಜಿನಲ್ಲಿ ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಉದ್ಘಾಟನೆ

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ (FMC) 75ನೇ ವರ್ಷದ ಅಮೃತ ಮಹೋತ್ಸವ ಸವಿ ನೆನಪಿಗಾಗಿ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ, ಪೋಷಕರು ಹಾಗೂ ಶಿಕ್ಷಕರ ಸಂಘ, ಮಡಿಕೇರಿಯ ಕ್ರಿಯೆಟಿವ್ ಖಲೀಲ್ ಹಾಗೂ ಆಲ್ಫಾ ಟೆಕ್ನಾಲಜೀಸ್‌ನ ಹೆಂಟ್ರಿಕ್ ಮಾರ್ಟಿನ್ ಜಿ ಇವರ ಸಹಯೋಗದಲ್ಲಿ ಕಾಲೇಜಿನ ಆವರಣದಲ್ಲಿ ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಅನ್ನು ಉದ್ಘಾಟಿಸಲಾಯಿತು. ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಅನ್ನು […]
ನಾಳೆ ಕೊಡಗು ವಿವಿಗೆ ಒಳಪಡುವ ಕಾಲೇಜುಗಳಿಗೆ ರಜೆ

ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವಿದ್ಯುತ್ ಹಾಗೂ ಸಂಪರ್ಕ ಕಡಿತಗಳಾಗಿರುವುದರಿಂದ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಇರುವ ಅಡೆತಡೆಗಳನ್ನು ಅವಲೋಕಿಸಿ ಹಾಗೂ ಕೊಡಗು (Kodagu) ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಡಗು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ, ಸರ್ಕಾರಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ದಿನಾಂಕ: 28-5-2025 ರಂದು ಒಂದು ದಿನದ ರಜೆ (Holiday) ಘೋಷಿಸಿ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ.ಅಶೋಕ ಸಂಗಪ್ಪ ಆಲೂರ ಅವರು ಆದೇಶ ಹೊರಡಿಸಿದ್ದಾರೆ. ಈ ದಿನಗಳಲ್ಲಿ ನಿಗದಿತವಾಗಿದ್ದ ಪ್ರಾಯೋಗಿಕ […]
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ

ಮಡಿಕೇರಿ: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ (Field Marshal KM Cariappa College) ವಾರ್ಷಿಕೋತ್ಸವವು (Anniversary) ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಪ್ರೊ.ಸುರೇಶ ಉದ್ಘಾಟಿಸಿ, ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಇತ್ತೀಚೆಗೆ ಉದ್ಯೋಗದಲ್ಲಿ ಹಿನ್ನಡೆ ಉಂಟಾಗುತ್ತಿದೆ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜ್ಜಿರ ಬಿ.ಅಯ್ಯಪ್ಪ ಮಾತನಾಡಿ, ಇತ್ತೀಚಿನ […]
ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿ ಆರಂಭ

2025 ನೇ ಸಾಲಿನ ಜೂನ್/ ಜುಲೈನಲ್ಲಿ ನಡೆಯಲಿರುವ ಎಲ್ಲಾ ಪದವಿ ಕಾರ್ಯಕ್ರಮಗಳ ದ್ವಿತೀಯ, ಚತುರ್ಥ ಹಾಗೂ 6 ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಲು ದಂಡಶುಲ್ಕ ರಹಿತ ಮೇ, 05 ಹಾಗೂ ದಂಡ ಶುಲ್ಕದೊಂದಿಗೆ ಮೇ, 12 ಕೊನೆಯ ದಿನವಾಗಿದೆ. ಹಾಗೆಯೇ ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿಯು (Admissions) ಆರಂಭವಾಗಿರುತ್ತದೆ. ಪ್ರವೇಶಾತಿ ಬಯಸುವವರು ಕಾಲೇಜನ್ನು ಸಂಪರ್ಕಿಸಬಹುದು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
ಕಲೋತ್ಸವ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮ

ಆಧುನಿಕ ಯುಗದಲ್ಲಿ ಪ್ರತಿ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಇದ್ದು, ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆರೋಗ್ಯಯುತವಾಗಿ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಗರದ ಕಾಲೇಜು ಸಭಾಂಗಣದಲ್ಲಿ ಕಲೋತ್ಸವ (Kalotsava) ಜಿಲ್ಲಾ ಮಟ್ಟದ ಅಂತರ್ ಕಾಲೇಜು (College) ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸ್ಪಷ್ಟತೆ ಇರಬೇಕು. ತೆಗೆದುಕೊಂಡ ನಿರ್ಧಾರ ಅಚಲವಾಗಿರಬೇಕು. ಜೀವನದಲ್ಲಿ ಶಿಸ್ತು […]