ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ನಿಯೋಗದಿಂದ ಸಿ.ಎಸ್. ಅರುಣ್ ಮಾಚಯ್ಯ ಭೇಟಿ

ಪೊನ್ನಂಪೇಟೆ : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಲಾಯಿತು. ಅಧ್ಯಕ್ಷ ಆಲೀರ ರಶೀದ್ ನೇತೃತ್ವದ ನಿಯೋಗ ಗೋಣಿಕೊಪ್ಪಲಿನ ಕಿತ್ತಳೆ ಬೆಳೆಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಿ ಮನವಿ ಸಲ್ಲಿಸಿತು. ಜೊತೆಗೆ ಸಂಸ್ಥೆಯ ಕ್ರೀಡಾ ಚಟುವಟಿಕೆಗಳ ಬಗ್ಗೆ ಮಾರ್ಗದರ್ಶನ ಪಡೆಯಿತು. ಕೆ.ಎಂ.ಎಸ್.ಎ. ಅಧ್ಯಕ್ಷ ರಶೀದ್ ಮಾತನಾಡಿ, ಸಂಸ್ಥೆ ಕ್ರೀಡಾ ಚಟುವಟಿಕೆಗಳ […]