ಅರಣ್ಯ ಸಚಿವರೇ… ಕಾಡಾನೆ ದಾಳಿಗೆ ಎಷ್ಟು ಜನ ಸತ್ರು ಅಂತ ಎಲ್ಲಿಯವರೆಗೆ ಹಾಕುತ್ತಾ ಇರ್ಬೇಕು..?

ನಾವು ಸತ್ತವರ ಸಂಖ್ಯೆ ಲೆಕ್ಕ ಹಾಕುತ್ತಲೇ ಎಷ್ಟು ದಿನ ಇರಬೇಕು..? ಮೊನ್ನೆ ಒಬ್ಬರು ಹಿರಿಯರು ಮಾತಿಗೆ ಸಿಕ್ಕಾಗ ಕೇಳಿದ ಪ್ರಶ್ನೆ ಇದು. ನನ್ನಲ್ಲೂ ಅವರ ಪ್ರಶ್ನೆಗೆ ಉತ್ತರವಿಲ್ಲದೆ, ಮರು ಪ್ರಶ್ನೆ ಹಾಕುತ್ತಲೇ ಮಾತು ಮುಂದುವರೆಸಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಕಾಡಾನೆಗಳ ದಾಳಿ ಇದೇ ಮೊದಲೇನಲ್ಲ. ದಶಕದಿಂದಲೂ ಇದೆ. ಈ ನಡುವೆ ಬಂದ ಹುಲಿರಾಯನ ಬಳಗ ಜಿಲ್ಲೆಯ ಜನರನ್ನು ನಿದ್ದೆಗೆಡಿಸಿತ್ತು. ಇದೀಗ ಅದರ ಜೊತೆಗೆ ಜಗಪಡೆಗಳೂ ಸೇರಿಕೊಂಡಿವೆ. ಹುಲಿ ದಾಳಿಗೆ […]

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಮಡಿಕೇರಿ:- ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಸಿಂಥಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ […]

ಕೆಲವು ದಿನದ ಹಿಂದಷ್ಟೇ ರಸ್ತೆ ದುಸ್ಥಿತಿ ಬಗ್ಗೆ ವರದಿ ಮಾಡಿ ಸಾರ್ವಜನಿಕ ಕಾಳಜಿ – ಅದೇ ರಸ್ತೆಯಲ್ಲಿ ಬಿದ್ದು ಗಾಯಗೊಂಡ ಪತ್ರಕರ್ತೆ..!

ಮಡಿಕೇರಿ : ಜಿಲ್ಲೆಯ ಬಹುತೇಕ ಕಡೆ ರಸ್ತೆಗಳ ಸ್ಥಿತಿ ಶೋಚನೀಯವಾಗಿದೆ. ಹಲವೆಡೆ ವಾಹನಗಳು ಸಂಚರಿಸುವುದೇ ದುಸ್ತರವಾಗಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರ ಪಾಡಂತೂ ಹೇಳತೀರದು. ಒಂದೆಡೆ ಹೊಂಡ ಗುಂಡಿಗಳು ರಸ್ತೆಯನ್ನು ಆವರಿಸಿದ್ದರೆ, ಮತ್ತೊಂದೆಡೆ ಈ ಬಾರಿಯ ನಿರಂತರ ಮಳೆಗೆ ಎಲ್ಲೆಲ್ಲಿಂದೋ ಬಂದು ರಸ್ತೆಯಲ್ಲಿ ಹರಡಿಕೊಂಡಿರುವ ಮಣ್ಣು & ಮರಳಿನ ರಾಶಿ ದ್ವಿಚಕ್ರ ವಾಹನ ಸವಾರರನನು ಯಮಸ್ವರೂಪಿಯಾಗಿ ಕಾಡುತ್ತಿದೆ. ಅದೆಷ್ಟೋ ಮಂದಿ ಹೊಂಡ, ಗುಂಡಿಗಳನ್ನು ತಪ್ಪಿಸಲು ಹೋಗಿ, ಮಣ್ಣು, ಮರಳಿನ ರಾಶಿಯಲ್ಲಿ ವಾಹನ ಜಾರಿದ ಪರಿಣಾಮ ಬಿದ್ದು ಗಾಯಗೊಂಡಿರುವ […]

ಮಡಿಕೇರಿ ದಸರಾ ಶೋಭಾಯಾತ್ರೆ – ಅಂತಿಮ ಸಿದ್ಧತೆ ಪರಿಶೀಲಿಸಿದ ಶಾಸಕ ಮಂತರ್ ಗೌಡ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆ ದಶಮಂಟಮಗಳ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಮಡಿಕೇರಿ ನಗರದಾದ್ಯಂತ ಕೈಗೊಂಡಿರುವ ಕ್ರಮಗಳ ಬಗ್ಗೆ ಶಾಸಕ ಡಾ. ಮಂತರ್ ಗೌಡ ಪರಿಶೀಲನೆ ನಡೆಸಿದರು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಕೆ.ರಾಮರಾಜನ್ ಅವರ ಜೊತೆ ವಿವಿಧ ಪ್ರದೇಶಗಳಿಗೆ ತೆರಳಿ ವಾಹನ ನಿಲುಗಡೆ ವ್ಯವಸ್ಥೆ, ಸುಗಮ ಸಂಚಾರ ವ್ಯವಸ್ಥೆ ಹಾಗೂ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಬೆಳೆಹಾನಿ ಸಮೀಕ್ಷೆ ನಿಖರ ಮಾಹಿತಿ ಒದಗಿಸಲು ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಸೂಚನೆ

ಮಡಿಕೇರಿ : ಕಳೆದ ನಾಲ್ಕು ತಿಂಗಳು ಸುರಿದ ಮಳೆಯಿಂದ ಉಂಟಾದ ಹಾನಿ ಬಗ್ಗೆ ಲೋಕೋಪಯೋಗಿ, ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸ್ಥಳೀಯ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳಿಂದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಮಾಹಿತಿ ಪಡೆದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಪರಿಹಾರ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಕಳೆದ ನಾಲ್ಕು ತಿಂಗಳು ಸುರಿದ ಧಾರಾಕಾರ ಮಳೆಯಿಂದ ರಸ್ತೆ, ಸೇತುವೆ, ಶಾಲಾ ಹಾಗೂ […]

ಮುಂಗಾರು: ಮಡಿಕೇರಿ ನಗರದಲ್ಲಿ ಹೆಚ್ಚಿನ ಎಚ್ಚರ ವಹಿಸಲು ಡಾ.ಮಂತರ್ ಗೌಡ ಸೂಚನೆ

Dr. Mantar Gowda

ಮಡಿಕೇರಿ:- ಮುಂಗಾರು (Monsoon) ಸಂದರ್ಭ ಮಡಿಕೇರಿ (Madikeri) ನಗರದಲ್ಲಿ ಹೆಚ್ಚಿನ ಎಚ್ಚರ ವಹಿಸುವಂತೆ ಶಾಸಕರಾದ ಡಾ.ಮಂತರ್‍ಗೌಡ (Dr. Mantar Gowda) ಅವರು ಸಲಹೆ ಮಾಡಿದ್ದಾರೆ.ನಗರದ ನಗರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ನಗರದ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ವಹಿಸಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದರು. ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ರಾಜ ಕಾಲುವೆಯಲ್ಲಿ ಕಸ ಕಡ್ಡಿ ಸೇರದಂತೆ […]

ಮಡಿಕೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ

Dr. Mantar Gowda

ಮಡಿಕೇರಿ:-ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ‘ಇಂದಿರಾ ಕ್ಯಾಂಟೀನ್’ನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ (Dr. Mantar Gowda) ಅವರು ಬುಧವಾರ ಉದ್ಘಾಟಿಸಿದರು. ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ಶಾಸಕರು ಸಲಹೆ ಮಾಡಿದರು. ಹಲವು ವರ್ಷಗಳಿಂದ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕಿತ್ತು. ಆದರೆ ಈಗ ಚಾಲನೆ ನೀಡಲಾಗಿದೆ ಎಂದರು. […]

ಅರೆಕಾಡು ಹೊಸ್ಕೇರಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ

Dr.Mantar Gowda

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಅರೆಕಾಡು ಹೊಸ್ಕೇರಿ ರಸ್ತೆಯ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ (Dr.Mantar Gowda) ಅವರು ಭೂಮಿಪೂಜೆ ನೆರವೇರಿಸಿದರು.ಕಳೆದ ಕೆಲವು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆಯಲ್ಲಿ ವಾಹನಗಳ ಸಂಚಾರ ಅಸಾಧ್ಯವಾಗಿತ್ತು. ಹೊಂಡ, ಗುಂಡಿಗಳಿAದ ಕೂಡಿದ್ದ ರಸ್ತೆಯ ಅಭಿವೃದ್ಧಿಗಾಗಿ ಇತ್ತೀಚೆಗೆ “ಕೊಡವ ವೆಲ್‌ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್” ಹಾಗೂ ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕರು ಅನುದಾನವನ್ನು ಮೀಸಲಿಟ್ಟು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಡಾ.ಮಂತರ್ ಗೌಡ ಅವರು […]