ಮಡಿಕೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ

ಮಡಿಕೇರಿ:-ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ‘ಇಂದಿರಾ ಕ್ಯಾಂಟೀನ್’ನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ (Dr. Mantar Gowda) ಅವರು ಬುಧವಾರ ಉದ್ಘಾಟಿಸಿದರು. ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ಶಾಸಕರು ಸಲಹೆ ಮಾಡಿದರು. ಹಲವು ವರ್ಷಗಳಿಂದ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕಿತ್ತು. ಆದರೆ ಈಗ ಚಾಲನೆ ನೀಡಲಾಗಿದೆ ಎಂದರು. […]
ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ… ಶಿಕ್ಷಣ ವ್ಯಕ್ತಿಗಳನ್ನು ದೇಶದ ಸಂಪತ್ತನ್ನಾಗಿ ಪರಿವರ್ತಿಸಬೇಕು: ಯು.ಟಿ.ಖಾದರ್

ಮಡಿಕೇರಿ : ಶಿಕ್ಷಣದ ಗುರಿ ಕೇವಲ ಅಂಕಗಳಿಗೆ, ರ‍್ಯಾಂಕ್ ಗಳಿಕೆಗೆ ಸಿಮೀತವಾಗಬಾರದು. ಅದರ ಜೊತೆಯಲ್ಲಿ ಆದರ್ಶ ವ್ಯಕ್ತಿಗಳಾಗಿ ಸಮಾಜಕ್ಕೆ ಮತ್ತು ದೇಶಕ್ಕೆ ಅಮೂಲ್ಯ ಸಂಪತ್ತಾಗಿ ಪರಿವರ್ತನೆಯಾಗಬೇಕು. ಈ ರೀತಿಯ ಮಾರ್ಪಾಡು ಮಾಡುವವರು ಮತ್ತು ಹೊಂದುವವರು ನಿಜವಾದ ದೇಶಪ್ರೇಮಿಗಳು ಎಂದು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮಹದೇವಪೇಟೆಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣದ ಸಂಪರ್ಕದ ಕೊಂಡಿಯಾಗಿರುವ ಉಮ್ಮತ್ ಒನ್ ಕೊಡಗು ಚಾರಿಟೇಬಲ್ […]
ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್ ಲೋಕಾರ್ಪಣೆ

ಮಣಿಪಾಲ: ಮಣಿಪಾಲ್ (Manipal) ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE- ಮಾಹೆ), ಮಣಿಪಾಲದಲ್ಲಿ ಭಾರತದಲ್ಲಿಯೇ ವಿಶಿಷ್ಟವೆನಿಸುವ ‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್’ (MHRC) ಅನ್ನು ಇದೇ ಏಪ್ರಿಲ್ 30, 2025ರಂದು ಆಂಧ್ರ ಪ್ರದೇಶ ರಾಜ್ಯಪಾಲರಾದ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರು ಉದ್ಘಾಟಿಸಲಿದ್ದಾರೆ. ಈ ಕೇಂದ್ರ ವು ಜುಲೈ 2025ರಿಂದ ಸೇವೆಗೆ ತೆರೆದುಕೊಳ್ಳಲಿದೆ. ಮಾಹೆಯ ಅತ್ಯುನ್ನತ ಸಮಾಜಮುಖಿ ಯೋಜನೆಯಾದ ಇದು, ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಗಂಭೀರವಾದ ಕಾಯಿಲೆಯಿಂದ ಬಳಲಿಯುತ್ತಿರುವ ರೋಗಿಗಳು ಮತ್ತು ಅವರ […]