ವೃದ್ಧಾಶ್ರಮದಲ್ಲಿ ಜನರಲ್ ತಿಮ್ಮಯ್ಯ ಅವರ ಹುಟ್ಟು ಹಬ್ಬ ಆಚರಣೆ

ಮಡಿಕೇರಿ:-ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೌಂಡೇಶನ್ ವತಿಯಿಂದ ಮಂಗಳವಾರ ತನಲ್ ಕೂರ್ಗ್ ಆಶ್ರಮ, ವಿಕಾಸ ಆಶ್ರಮ ಮತ್ತು ಶಕ್ತಿ ವೃದ್ಧಾಶ್ರಮದಲ್ಲಿ ಜನರಲ್ ತಿಮ್ಮಯ್ಯ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ವೃದ್ಧಾಶ್ರಮದಲ್ಲಿನ ಆಶ್ರಯದಾತರಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ತನಲ್ ಕೂರ್ಗ್ ವೃದ್ಧಾಶ್ರಮಕ್ಕೆ ಶಾಸಕರು ಹಾಗೂ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೌಂಡೇಶನ್‍ನ ಗೌರವ ಅಧ್ಯಕ್ಷರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಭೇಟಿ ನೀಡಿ ಹೂ ಗುಚ್ಛ ನೀಡಿ ಗೌರವಿಸಿದರು. ಬಳಿಕ ಮಾತನಾಡಿದ […]
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ 127ನೇ ಜನ್ಮ ದಿನಾಚರಣೆ

ಮಡಿಕೇರಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 127 ನೇ ಜನ್ಮ ದಿನಾಚರಣೆ ಪ್ರಯುಕ್ತ ಬುಧವಾರ ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ, ಗೌರವ ನಮನ ಸಲ್ಲಿಸಿದರು. ಏರ್ ಮಾರ್ಷಲ್(ನಿವೃತ್ತ) ನಂದ ಕಾರ್ಯಪ್ಪ, ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ […]
ಕೊಡಗಿನ ಪುಡಿಯಂಡ ಹೆಚ್. ರಫಿ ಸುಬೇದಾರ್ ಮೇಜರ್ ಆಗಿ ಪದೋನ್ನತಿ

ಮಡಿಕೇರಿ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ದೇವಣಗೇರಿ ಗ್ರಾಮದ ಪುಡಿಯಂಡ ಹೆಚ್. ರಫಿ ಸುಬೇದಾರ್ ಮೇಜರ್ ಆಗಿ ಪದೋನ್ನತಿ ಪಡೆದಿದ್ದಾರೆ. ಭಾರತೀಯ ಸೇನೆಯ 22ನೇ ಮರಾಠ ಲೈಟ್ ಇನ್ಫೆಂಟ್ರಿ ರೆಜಿಮೆಂಟಿನಲ್ಲಿ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪುಡಿಯಂಡ ಹೆಚ್. ರಫಿ ಅವರು ಸುಬೇದಾರ್ ಮೇಜರ್ ಆಗಿ ಪದೋನ್ನತಿ ಪಡೆದಿರುವುದು ನಮ್ಮ ಸಮುದಾಯಕ್ಕೆ ಮಾತ್ರವಲ್ಲ ಇಡೀ ಕೊಡಗು ಜಿಲ್ಲೆಗೆ ಕೀರ್ತಿ ಮೂಡಿಸಿದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ ಮೆಚ್ಚುಗೆ ವ್ಯಕ್ತಪಡಿಸಿದೆ. ದೇವಣಗೇರಿ ಗ್ರಾಮದ ದಿ.ಪುಡಿಯಂಡ ಹಂಸ ಮತ್ತು ಫಾತುಮಾ […]
ಮಿಲಿಟರಿ ಪಿಂಚಣಿ ಇಲ್ಲದ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಿಲಿಟರಿ ಪಿಂಚಣಿ ಇಲ್ಲದ ಕರ್ನಾಟಕ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತು ಪಡಿಸಿ) ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ ಡಿಪ್ಲೋಮ ಜೆಓಸಿ/ ಪ್ರೋಫೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ(ಅಧಿಕಾರಗಳನ್ನು ಹೊರತು ಪಡಿಸಿ) ಶಿಷ್ಯ […]
ವಾಯುಪಡೆ ಅಗ್ನಿವೀರರ ಪ್ರವೇಶ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ

ಭಾರತೀಯ ವಾಯು ಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು. ಇಲ್ಲವೇ 02 ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ […]
ಆರ್ಮಿ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ಸೈನಿಕರು, ನಿವೃತ್ತ ಸೈನಿಕರಿಗೆ ಆರ್ಮಿ ಕ್ಯಾಂಟೀನ್‌ನಿಂದ (Army Canteen)ದೊರೆಯುವ ಮದ್ಯಕ್ಕೆ ಸುಂಕ ವಿಧಿಸುವ ವಿಚಾರ ಕೆಲವು ದಿನದಿಂದ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದು, ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬೆಂಗಳೂರಿನ ಟೌನ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದರು. ಸುಂಕ ವಿಧಿಸಲು ಮುಂದಾಗಿದ್ದ ಸರ್ಕಾರದ ಕ್ರಮಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಆ […]
Operation Sindoor: ಪಾಕ್ ಒಳಗೆ ನುಗ್ಗಿ ಹೊಡೆದ ಬಗ್ಗೆ ಪಿನ್ ಟು ಪಿನ್ ಡೀಟೇಲ್ಸ್ ಬಿಚ್ಚಿಟ್ಟ ಸೇನೆ

ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಸುಮಾರು ಹದಿನೈದು ದಿನಗಳ ನಂತರ, ಮಂಗಳವಾರ-ಬುಧವಾರದ ಮಧ್ಯರಾತ್ರಿ ಭಾರತವು ಪಾಕಿಸ್ತಾನದ ಒಳಗೆ ನುಗ್ಗಿ ಹೊಡೆಯಲು ಸಿದ್ಧ ಎಂಬುದನ್ನು ಭಾರತೀಯ ಸೇನೆ ನಿರೂಪಿಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಭಯೋತ್ಪಾದಕ ಶಿಬಿರಗಳ ವಿರುದ್ಧ ‘ಆಪರೇಷನ್ ಸಿಂಧೂರ್’ (Operation Sindoor) ಅಡಿಯಲ್ಲಿ ನಿಖರವಾದ ದಾಳಿ ನಡೆಸಿದೆ. ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಕರ್ನಲ್ ಸೋಫಿಯಾ ಹಂಚಿಕೊಂಡ ಮಾಹಿತಿ ಪ್ರಕಾರ, ಈ […]
ಅಗ್ನಿವೀರ್ ಆಗಲು ಸುವರ್ಣ ಅವಕಾಶ: ಅರ್ಜಿ ಸಲ್ಲಿಸುವುದು ಹೇಗೆ?

ಭಾರತೀಯ ಸೇನೆಯಲ್ಲಿ ಅಗ್ನಿಪಥ (Agni path) ಯೋಜನೆಯ ಅಗ್ನಿವೀರರಾಗಲು (Agniveer) ಸುವರ್ಣ ಅವಕಾಶವಿದೆ. ಭಾರತೀಯ ರಕ್ಷಣಾ ಪಡೆಗಳಲ್ಲಿ ಅಗ್ನಿವೀರರನ್ನು ಆಯ್ಕೆ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು, ಅರ್ಹತೆ ಇರುವವರು ಅರ್ಜಿ ಸಲ್ಲಿಸಿ. ಈ ಹುದ್ದೆಗಳ ವಿಶೇಷತೆ ಎಂದರೆ ನೀವು ನಾಲ್ಕು ವರ್ಷ ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಮಾಡುವ ಜತೆಗೆ, ಅತ್ಯುತ್ತಮ ಸಂಬಳ ಪಡೆಯುವ ಜತೆಗೆ, ನಿಮ್ಮ ಮುಂದಿನ ಶಿಕ್ಷಣಗಳನ್ನು ಸಹ ಅಲ್ಲಿಯೇ ಮುಗಿಸಿಕೊಳ್ಳಬಹುದಾಗಿದೆ. ಅರ್ಜಿಗೆ ಬೇಕಾದ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ. […]