ಡಿ.11ರಂದು ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಲೋಕಾರ್ಪಣೆ

ಪೊನ್ನಂಪೇಟೆ: ಕ್ರೀಡಾ ಚಟುವಟಿಕೆಗಳ ಆಯೋಜನೆ ಮತ್ತು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಮಾತ್ರ ಸೀಮಿತಪಟ್ಟು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ಇದೇ ತಿಂಗಳ 11ರಂದು ಗುರುವಾರ ಉದ್ಘಾಟನೆಗೊಳ್ಳಲಿದೆ. ಮಡಿಕೇರಿ ತಾಲೂಕಿನ ಕಕ್ಕಬ್ಬೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲೆಯೊಂದಕ್ಕೆ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸುವ ಮೂಲಕ ಕೆ.ಎಂ.ಎಸ್.ಎ.ಯನ್ನು ವಿದ್ಯುಕ್ತವಾಗಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಅಕಾಡೆಮಿ ಅಧ್ಯಕ್ಷರಾದ ಆಲೀರ ರಶೀದ್ ತಿಳಿಸಿದ್ದಾರೆ. ಈ ಕುರಿತು ವಿರಾಜಪೇಟೆಯಲ್ಲಿ ನಡೆದ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯ ಕಾರ್ಯಕಾರಿ ಸಮಿತಿ ಸಭೆಯ […]