ಕಾರಿನಲ್ಲಿತ್ತು ಮಹಿಳೆ ಶ*ವ – ಮಧ್ಯರಾತ್ರಿ ಚೆಕ್‌ಪೋಸ್ಟ್‌ನಲ್ಲಿ ಸಿಕ್ಕಿಬಿದ್ದ ಮೂವರು..!

ಸಿದ್ದಾಪುರ : ಕಾರಿನಲ್ಲಿ ಮಹಿಳೆಯ ಶ*ವ ಸಾಗಿಸುತ್ತಿದ್ದ ಪ್ರಕರಣ ಮಾಲ್ದಾರೆ ಚೆಕ್‌ಪೋಸ್ಟ್‌ನಲ್ಲಿ ಬೆಳಕಿಗೆ ಬಂದಿದೆ. ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್ ಮೂಲಕ ನಿನ್ನೆ ನಡುರಾತ್ರಿ ಕಾರೊಂದರಲ್ಲಿ ಮಹಿಳೆಯೊಬ್ಬರ ಮೃ*ತದೇಹವನ್ನು ಸಾಗಿಸಲು ಪ್ರಯತ್ನ ನಡೆದಿತ್ತು. ಈ ವೇಳೆ ಅಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ತಪಾಸಣೆ ನಡೆಸುವ ವೇಳೆ ಶ*ವ ಇರುವುದು ಕಂಡುಬಂದಿದೆ. ತಕ್ಷಣ ಎಚ್ಚೆತ್ತ ಸಿಬ್ಬಂದಿ ಕಾರಿನಲ್ಲಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಶಕ್ಕೆ ಪಡೆದವರ ವಿಚಾರಣೆ ನಡೆಸುತ್ತಿದ್ದಾರೆ. ಮೈಸೂರಿನಿಂದ […]
ಕಾವೇರಿ ನದಿಯಲ್ಲಿ ಮುಳುಗಿ ಹೆಣ್ಣು ಕಾಡಾನೆ ಸಾವು

ಕುಶಾಲನಗರ : ಕಾವೇರಿ ನದಿಯಲ್ಲಿ ಮುಳುಗಿ ಹೆಣ್ಣಾನೆಯೊಂದು ಮೃತಪಟ್ಟ ಪ್ರಕರಣ ಮೀನುಕೊಲ್ಲಿ ಅರಣ್ಯದಲ್ಲಿ ವರದಿಯಾಗಿದೆ. ವಾಲ್ನೂರು-ಮಾಲ್ದಾರೆ ನಡುವೆ ಹರಿಯುವ ಕಾವೇರಿ ನದಿಯಲ್ಲಿ ಸೆ.17ರಂದು ಆನೆಯ ಮೃತದೇಹ ಕಂಡುಬಂದಿತ್ತು. ನದಿಯ ಮಧ್ಯ ಭಾಗದಲ್ಲಿ ಮೃತದೇಹವಿದ್ದ ಕಾರಣ ನಿನ್ನೆ ಹೊರಗೆಳೆಯಲು ಸಾಧ್ಯವಾಗಲಿಲ್ಲ. ಇಂದು ಬೋಟ್ ಹಾಗೂ ಸಾಕಾನೆಗಳ ನೆರವಿನಿಂದ ಆನೆಯ ಮೃತದೇಹವನ್ನು ನದಿಯಿಂದ ಹೊರತರಲಾಯಿತು. ಮರಣೋತ್ತರ ಪರೀಕ್ಷೆ ವೇಳೆ ಯಾವುದೇ ಗಾಯದ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಇದು ನೀರಿನಲ್ಲಿ ಮುಳುಗಿ ಮೃತಪಟ್ಟಿದೆ ಎಂದು ಇಲಾಖೆಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಬಳಿಕ ಅಲ್ಲೇ […]