ಶಾಲಾ ಜಾಗ ಉಳಿಸಲು ಬಿಜೆಪಿ ಹೋರಾಟ ಹೊರತು ಶಾಸಕರ ವಿರುದ್ಧದ ವೈಯಕ್ತಿಕ ದ್ವೇಷವಲ್ಲ: ಅಂಬಿ ಕಾರ್ಯಪ್ಪ

school land

ನಾಪೋಕ್ಲು: ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆಯ ಜಾಗ ಒತ್ತುವರಿಯಾಗಿರುವ ಬಗ್ಗೆ ,ಒತ್ತುವರಿಯಾಗಿರುವ ಜಾಗವನ್ನು ಉಳಿಸಿಕೊಳ್ಳುವ ಬಗ್ಗೆ ಭಾರತೀಯ ಜನತಾ ಪಕ್ಷವು ಹೋರಾಟ ಮಾಡುತ್ತಿದೆ ಹೊರತು ಶಾಸಕರ ತೇಜೋವಧೆ ಮಾಡುವ ಉದ್ದೇಶಕ್ಕಾಗಿ ಅಲ್ಲ ಎಂದು ಬಿಜೆಪಿ ಪಕ್ಷದ ಪರವಾಗಿ ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಕ್ ಶಿವಾಚಾಳಿಯಂಡ ಅಂಬಿ ಕಾರ್ಯಪ್ಪ ಸ್ಪಷ್ಟನೆ ನೀಡಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪಕ್ಷ ದಿಂದ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 1950 ರ ದಶಕದಲ್ಲಿ ಅಂದಿನ ಹಿರಿಯರ ಮತ್ತು ದಾನಿಗಳ ಪ್ರಯತ್ನದಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ […]

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಮಡಿಕೇರಿ:- ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಸಿಂಥಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ […]

ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ – ರಸ್ತೆ ಅವ್ಯವಸ್ಥೆ ಬಗ್ಗೆ ಬಿಸಿ ಬಿಸಿ ಚರ್ಚೆ..! – ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಹೇಳಿದ್ದೇನು..?

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ನೀರಾವರಿ ಇಲಾಖೆ ವ್ಯಾಪ್ತಿಯ ರಸ್ತೆಗಳು ಹದಗೆಟ್ಟಿದ್ದು, ಈಗಾಗಲೇ ಮಳೆಗಾಲ ಮುಗಿದಿರುವುದರಿಂದ ಶೀಘ್ರ ರಸ್ತೆ ಕಾಮಗಾರಿ ಕೈಗೊಂಡು ಪೂರ್ಣಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ 2025-26 ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

ಮಡಿಕೇರಿ : ಚೈನ್‌ಗೇಟ್‌ ಬಳಿ ನೂತನ ಪ್ರಯಾಣಿಕರ ತಂಗುದಾಣ, ಬಾಟಲ್‌ ಡ್ರಾಪ್‌ ಲೋಕಾರ್ಪಣೆ

ಮಡಿಕೇರಿ : ಲಯನ್ಸ್ ಕ್ಲಬ್ ಹಾಗೂ ಮಡಿಕೇರಿ ಶಾಸಕ ಮಂತರ್ ಗೌಡ ಅವರ ವಿಶೇಷ ಅನುದಾನದಲ್ಲಿ ವಾರ್ಡ್ ನಂ.6ರ ಚೈನ್ ಗೇಟ್ ಬಳಿ ನಿರ್ಮಾಣಗೊಂಡಿರುವ ಪ್ರಯಾಣಿಕರ ತಂಗುದಾಣದ ಉದ್ಘಾಟನಾ ಕಾರ್ಯಕ್ರಮ ಬುಧವಾರ ನಡೆಯಿತು. ಶಾಸಕ ಮಂತರ್ ಗೌಡ ತಂಗುದಾಣವನ್ನು ಉದ್ಘಾಟಿಸಿದರು. 3 ಲಕ್ಷ ರೂ. ವೆಚ್ಚದಲ್ಲಿ ತಂಗುದಾಣ ನಿರ್ಮಿಸಲಾಗಿದೆ. ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಪಕ್ಕದಲ್ಲೇ ಅಳವಡಿಸಲಾಗಿರುವ ಬಾಟಲ್ ಡ್ರಾಪ್ ಒಳಗೆ ಬಾಟಲಿಗಳನ್ನು ಹಾಕುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು. ಲಯನ್ಸ್ ಸಂಸ್ಥೆಯ ಗವರ್ನರ್ ಅರವಿಂದ್, […]

ದಸರಾ ಸಂಭ್ರಮಕ್ಕೆ ಕಂಟಕವಾಗುತ್ತಿದೆ ಮಂಟಪಗಳ ಸ್ಪರ್ಧೆ..!

ನಿಶ್ಚಿತವಾದ ಧ್ಯೇಯ ಸಾಧನೆ ಹಾಗೂ ಸಂಸ್ಕೃತಿ ಪ್ರಸಾರವೇ ತನ್ನ ಮುಖ್ಯ ಮೌಲಿಕ ಗುರಿಯನ್ನಾಗಿಸಿಕೊಂಡು ಆಚರಿಸಲ್ಪಡುವ ಯಾವುದೇ ಹಬ್ಬ, ಉತ್ಸವ, ಆಚರಣೆಗಳು ಶ್ರದ್ಧಾ ಭಕ್ತಿಯ ಪ್ರತಿಬಿಂಬವಾಗಿ ಸರ್ವ ಧರ್ಮೀಯರ ಮಾನ್ಯತೆಗೆ ಖಂಡಿತವಾಗಿಯೂ ಒಳಪಡುತ್ತದೆ. ಸಾಮೂಹಿಕ ಆಚರಣೆಗೆ ಒಳಪಡುವ ಯಾವುದೇ ಹಬ್ಬ, ಸಂಪ್ರದಾಯ, ಆಚರಣೆಗಳೂ ಕೂಡ ಇಂತಹ ಗುರುತರವಾದ ಜವಾಬ್ದಾರಿಯನ್ನು ಅತೀ ಮುಖ್ಯವಾಗಿ ನಿರ್ವಹಿಸಬೇಕಾಗುತ್ತದೆ. ಏಕೆಂದರೆ ಈ ಆಚರಣೆ ಕೇವಲ ಸಂಭ್ರಮ, ಮನರಂಜನೆಗಾಗಿ ಆಗಿರುವುದಿಲ್ಲ. ಆ ಮೂಲಕ ಒಂದು ಸಂಸ್ಕೃತಿಯ ಐಕ್ಯತೆ, ಒಗ್ಗಟ್ಟಿನ ಮೂಲಕ ತನ್ನ ಪ್ರತಿಷ್ಠೆ, ಅಭಿಮಾನದಿಂದ ಸಮಾಜಕ್ಕೆ […]

ʼರಸ್ತೆ ಕಾಣೆಯಾಗಿದೆʼ – ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಿ..! – ಕೊಡಗಿನ ರಸ್ತೆಗಳ ಶೋಚನೀಯ ಸ್ಥಿತಿಗೆ ಕನ್ನಡಿ ಹಿಡಿದ ಬ್ಯಾನರ್..!

ಸಿದ್ದಾಪುರ : ಕೊಡಗು ಜಿಲ್ಲೆಯಲ್ಲಿ ಬಹುತೇಕ ರಸ್ತೆಗಳ ಸ್ಥಿತಿ ಬಹಳ ಶೋಚನೀಯವಾಗಿದೆ. ಎಲ್ಲೆಡೆ ಹೊಂಡ ಗುಂಡಿಗಳಿಂದ ಕೂಡಿರುವ ರಸ್ತೆಗಳಿಂದಾಗಿ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಎಲ್ಲಿ ಉತ್ತಮ ರಸ್ತೆ ಇದೆ ಅಂತ ಹುಡುಕುವ ಪರಿಸ್ಥಿತಿ ಎದುರಾಗಿದೆ ಎಂದರೆ ತಪ್ಪಾಗಲಾರದು. ಈ ನಡುವೆ ಮಳೆಗಾಲದಲ್ಲಿ ರಸ್ತೆಗಳು ಹಾಳಾಗಿರುವುದರಿಂದಾಗಿ ಸರ್ಕಾರ ವಿಶೇಷ ಪ್ಯಾಕೇಜ್‌ ಅನ್ನು ಜಿಲ್ಲೆಗೆ ನೀಡಬೇಕೆಂಬ ಆಗ್ರಹವೂ ವ್ಯಕ್ತವಾಗುತ್ತಿದೆ. ಇದರ ನಡುವೆ ಸರ್ಕಾರವನ್ನು ಅಣಕಿಸುವ ರೀತಿಯಲ್ಲಿ ಒಂದಷ್ಟು ಪೋಸ್ಟ್‌ಗಳು ಗಮನಸೆಳೆಯುತ್ತಿದೆ. ಜಿಲ್ಲೆಯ ನೆಲ್ಯಹುದಿಕೇರಿಯ ಮುಖ್ಯ ರಸ್ತೆ ಬದಿಯಲ್ಲಿ […]

ಲೈನ್‍ಮನೆಗಳಲ್ಲಿರುವ 2 ಸಾವಿರ ಆದಿವಾಸಿ ಬುಡಕಟ್ಟು ಕುಂಟುಂಬಕ್ಕೆ ಶೀಘ್ರ ಹಕ್ಕುಪತ್ರ ವಿತರಣೆ: ಎ.ಎಸ್.ಪೊನ್ನಣ್ಣ

ಜಿಲ್ಲೆಯ ಲೈನ್‍ಮನೆಗಳಲ್ಲಿ ವಾಸಿಸುವ ಬುಡಕಟ್ಟು ಆದಿವಾಸಿಯ 2000 ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಹಕ್ಕು ಪತ್ರವನ್ನು ಎರಡು ಮೂರು ತಿಂಗಳಲ್ಲಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ನಿವೇಶನ ಹಕ್ಕು ಪತ್ರ ನೀಡುವ ಸಂಬಂಧ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ […]

ವಿದ್ಯುತ್ ಆಘಾತಕ್ಕೆ ಯುವಕ ಬಲಿ – ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಶಾಸಕ ಡಾ. ಮಂತರ್‌ ಗೌಡ

ಮಡಿಕೇರಿ : ನಿನ್ನೆ ವಿದ್ಯುತ್‌ ಆಘಾತಕ್ಕೆ ಒಳಗಾಗಿ ಮೃತಪಟ್ಟ ಹುಲಿತಾಳದ ಯುವಕ ಹೆಚ್.ಪಿ.ಪ್ರತೀಪ್‌ ಕುಟುಂಬಸ್ಥರನ್ನು ಶಾಸಕ ಡಾ. ಮಂತರ್‌ ಗೌಡ (Mantar Gowda) ಭೇಟಿಯಾಗಿ ಸಾಂತ್ವನ ಹೇಳಿದರು. ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಮಂತರ್‌ ಗೌಡ ಘಟನೆಯ ಬಗ್ಗೆ ಕುಟುಂಬಸ್ಥರಿಂದ ಮಾಹಿತಿ ಪಡೆದರು. ನಿನ್ನೆ ಮನೆಯ ಬಳಿ ವಿದ್ಯುತ್‌ ಕಂಬ ಏರಿ ದುರಸ್ಥಿ ವೇಳೆ ವಿದ್ಯುತ್‌ ತಗಲಿ ಪ್ರತೀಪ್‌ ಮೃತಪಟ್ಟಿದ್ದರು.

ಮಡಿಕೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ

Dr. Mantar Gowda

ಮಡಿಕೇರಿ:-ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ‘ಇಂದಿರಾ ಕ್ಯಾಂಟೀನ್’ನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ (Dr. Mantar Gowda) ಅವರು ಬುಧವಾರ ಉದ್ಘಾಟಿಸಿದರು. ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ಶಾಸಕರು ಸಲಹೆ ಮಾಡಿದರು. ಹಲವು ವರ್ಷಗಳಿಂದ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕಿತ್ತು. ಆದರೆ ಈಗ ಚಾಲನೆ ನೀಡಲಾಗಿದೆ ಎಂದರು. […]