ಕೊಡಗಿನಲ್ಲಿ ಮಳೆ ಆರ್ಭಟ: ನಾನಾ ಅವಾಂತರ ಸೃಷ್ಟಿ, ಎಲ್ಲೆಲ್ಲಿ ಏನೇನಾಗಿದೆ?

kodagu rain

ಅವಧಿಗೂ ಮುನ್ನವೇ ಕೊಡಗಿಗೆ (Kodagu) ಕಾಲಿಟ್ಟಿರುವ ಮುಂಗಾರು (Monsoon) ಮಳೆ ಆರಂಭದಲ್ಲೇ ಅವಾಂತರಗಳನ್ನು ಸೃಷ್ಟಿಸಿದೆ. ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಬಿರುಗಾಳಿ ಸಹಿತ ಮಳೆಗೆ ಜಿಲ್ಲೆಯ ಹಲವೆಡೆಗಳಲ್ಲಿ ನೀರು ರಸ್ತೆ ಮೇಲೆ ನದಿಯಂತೆ ಹರಿದಿದೆ. ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡು ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಮಾಲ್ದಾರೆ ಸುತ್ತಮುತ್ತಲಿನಲ್ಲಿ ಸುರಿಯುತ್ತಿದ್ದ ಭಾರಿ ಗಾಳಿ ಮಳೆಗೆ ಮನೆಯಿಂದ ಹೊರ ಬರುತ್ತಿದ್ದಂತೆ ಮರದ ಕೊಂಬೆ ಮುರಿದು ಬಿದ್ದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ […]

ಮುಂಗಾರು ಆರಂಭ: ಜಿಲ್ಲಾಡಳಿತದ ಸಹಾಯವಾಣಿಗೆ ಮಾಹಿತಿ ನೀಡಿ

helpline

ಮಡಿಕೇರಿ:- ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು (Monsoon) ಆರಂಭವಾಗಿದ್ದು, ಜಿಲ್ಲಾಡಳಿತದಿಂದ ಸಹಾಯವಾಣಿ (Helpline) ಸಂಖ್ಯೆ 08272-221077 ಆರಂಭಿಸಿದೆ. ಜೊತೆಗೆ 8550001077 ವಾಟ್ಸ್ಆಪ್ ಸಂಖ್ಯೆಯನ್ನು ಸಹ ಆರಂಭಿಸಿದ್ದು, ಅತಿವೃಷ್ಟಿಯಿಂದ ಉಂಟಾಗುವ ವಿಪತ್ತಿನ ಬಗ್ಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಡಾ.ಎನ್.ವಿ.ಪ್ರಸಾದ್ ಅವರು ತಿಳಿಸಿದ್ದಾರೆ. ಮುಂಗಾರು ಆರಂಭ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಂಗಳವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಮಡಿಕೇರಿ ತಾಲ್ಲೂಕು […]

ಮುಂಗಾರು: ಮಡಿಕೇರಿ ನಗರದಲ್ಲಿ ಹೆಚ್ಚಿನ ಎಚ್ಚರ ವಹಿಸಲು ಡಾ.ಮಂತರ್ ಗೌಡ ಸೂಚನೆ

Dr. Mantar Gowda

ಮಡಿಕೇರಿ:- ಮುಂಗಾರು (Monsoon) ಸಂದರ್ಭ ಮಡಿಕೇರಿ (Madikeri) ನಗರದಲ್ಲಿ ಹೆಚ್ಚಿನ ಎಚ್ಚರ ವಹಿಸುವಂತೆ ಶಾಸಕರಾದ ಡಾ.ಮಂತರ್‍ಗೌಡ (Dr. Mantar Gowda) ಅವರು ಸಲಹೆ ಮಾಡಿದ್ದಾರೆ.ನಗರದ ನಗರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ನಗರದ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ವಹಿಸಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದರು. ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ರಾಜ ಕಾಲುವೆಯಲ್ಲಿ ಕಸ ಕಡ್ಡಿ ಸೇರದಂತೆ […]

ಮುಂಗಾರಿಗೆ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮ ವಹಿಸಿ: ಜಿಲ್ಲಾಧಿಕಾರಿ

District Collector

ಮುಂಗಾರು ಸಂಬಂಧ ನೋಡಲ್ ಅಧಿಕಾರಿಗಳು ಹಾಗೂ ಎಂಜಿನಿಯರ್‍ಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಆದ್ದರಿಂದ ವ್ಯಾಪಕ ಮಳೆಯಿಂದ ಸಂಭವಿಸಬಹುದಾದ ಅನಾಹುತವನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದರು. ಮುಂಗಾರು ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ, […]